‘ಯುವಕರಲ್ಲಿ ಹಿಂಸಾಚಾರದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’
'Awareness should be created among youth about the ill effects of violence'
ದೇವರಹಿಪ್ಪರಗಿ 21: ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಏಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಯುವಕರಲ್ಲಿ ಭಯೋತ್ಪಾದನೆ ಹಾಗೂ ಹಿಂಸಾಚಾರದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ತಹಶೀಲದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲದಾರರ ಕಚೇರಿಯಲ್ಲಿ ನಡೆದ ಭಯೋತ್ಪಾದನೆ ವಿರೋಧಿ ದಿನದ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿರಸ್ತೇದಾರರಾದ ಸುರೇಶ ಮ್ಯಾಗೇರಿಯವರು ಕಚೇರಿಯ ಎಲ್ಲ ಸಿಬ್ಬಂದಿ ವರ್ಗದವರಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಹಾಗೂ ಇದೇ ದಿನ ಭಯೋತ್ಪಾದಕರ ದಾಳಿಗೆ 1991 ರಲ್ಲಿ ಬಲಿಯಾದ ಮಾಜಿ ಪ್ರಧಾನಿ ರಾಜೀವಗಾಂಧಿಯವರನ್ನು ಸ್ಮರಿಸಿದರು. ಇದೇ ಸಂದರ್ಭದಲ್ಲಿ ಉಪತಹಶೀಲದಾರ ಗಿರಿಜಾಬಾಯಿ ಸಜ್ಜನ,ಶಿರಸ್ತೇದಾರ ಡಿ.ಬಿ. ಭೋವಿ, ಶಿಲ್ಪಾ ಶಿಂಪಿ, ಅಮೋಘಸಿದ್ದ ದಳವಾಯಿ, ಜಿ.ಪಿ.ಬಿರಾದಾರ, ಕುಮಾರ ಅವರಾದಿ,ವಿಟ್ಠಲ ವಾಲೀಕಾರ, ಚನಬಸು ಹೊಸಮನಿ, ಅಬುಲ ಕಲಾಮ ಮೋಮಿನ, ವಿಜಯಲಕ್ಷ್ಮಿ ಗಂಗಶೆಟ್ಟಿ ರಾಜು ಕಂಠಿ, ನಾಗೇಶ ದೊಡಮನಿ ಹಾಗೂ ಇತರರು ಹಾಜರ ಇದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 