ಆ.20ರಂದು ನೇಸರಗಿ ಗ್ರಾಮಕ್ಕೆ ಡಾ. ಅಲ್ಲಮಪ್ರಭು ಶ್ರೀಗಳಿಂದ ಬಸವ ನಡಿಗೆ
'Basava Nadige' (Basava Walkathon) to Nesargi village by Dr. Allamaprabhu Shri on August 20
ನೇಸರಗಿ 17 : ಪವಿತ್ರ ಶ್ರಾವಣ ಮಾಸದ ಅಂಗವಾಗಿ ಬೆಳಗಾವಿ-ನಾಗನೂರು ರುದ್ರಾಕ್ಷಿಮಠದ ಪರಮಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ‘ಪೂಜ್ಯರೊಂದಿಗೆ ಬಸವ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಗೆ ನೇಸರಗಿಯ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನ ಮೂರ್ತಿಗೆ ಮಾಲಾರೆ್ಣ ಮಾಡುವ ಮೂಲಕ ಬಸವ ನಡಿಗೆಗೆ ಚಾಲನೆ ನೀಡಲಾಗುವುದು. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಜನೆಗಳೊಂದಿಗೆ ಬಸವ ನಡಿಗೆ ನಡೆಸಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪಕ್ಕೆ ಆಗಮಿಸಲಾಗುವುದು. ನಂತರ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ನೇಸರಗಿ-ಮಲ್ಲಾಪುರ ಕೆ.ಎನ್. ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ ಸೇರಿದಂತೆ ಬಸವಣ್ಣನ ಅಭಿಮಾನಿಗಳು, ಲಿಂಗಾಯತ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಶರಣರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಸವ ಅಭಿಮಾನಿಗಳು ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 