ಕ್ರಿಕೆಟ್ ಬೆಟ್ಟಿಂಗ್ ಕಥೆಯಾಧಾರಿತ ’ಬ್ರ್ಯಟ್’ ನಾಳೆ ರಾಜ್ಯಾದ್ಯಂತ ಸಿನಿಮಾ ತೆರೆಗೆ
'Brat', based on the story of cricket betting, will hit cinema screens across the state tomorrow
ಡಾರ್ಲಿಂಗ್ ಕೃಷ್ಣ ಹಾಗೂ ನಿರ್ದೇಶಕ ಶಶಾಂಕ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ’ಬ್ರ್ಯಟ್’ ಸಿನಿಮಾ ಬಿಡುಗಡೆಗೆ ದಿನ ಗಣನೆ ಆರಂಭವಾಗಿದ್ದು ಇದೇ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಸಿನಿಮಾ ತೆರಿಗೆ ಬರುತ್ತಿದೆ. ಕನ್ನಡ, ತಮಿಳು, ತೆಲುಗು ಸೇರಿದಂತೆ ಐದು ಭಾಷೆಯಲ್ಲಿ ಸಿನಿಮಾ ನಿರ್ಮಾಣವಾಗಿದ್ದರು, ಕನ್ನಡದಲ್ಲಿ ಮಾತ್ರ ಇದೇ ಶುಕ್ರವಾರ (ಅ. 31) ಬಿಡುಗಡೆಗೊಳ್ಳಲಿದೆ.
ಕೆ.ವಿ.ಎನ್ ಪ್ರೊಡಕ್ಷನ್ ವಿತರಣ ಸಂಸ್ಥೆ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದೆ. ಈ ಚಿತ್ರದ ನಾಯಕಾನಾಗಿ ಡಾರ್ಲಿಂಗ್ ಕೃಷ್ಣ ನಟಿಸಿದ್ದು, ನಾಯಕಿಯಾಗಿ ಮನಿಷಾ ಕಂದಕೂರ್ ಅಭಿನಯ ಮಾಡಿದ್ದಾರೆ. ಮನಿಷಾಗೆ ಇದು ಕನ್ನಡ ಮೊದಲ ಸಿನಿಮಾ. ಉಳಿದಂತೆ ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಗಣದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಹಾಗೂ ಗಿರಿ ಮಹೇಶ್ ಸಂಕಲನ ಸಿನಿಮಾಗಿದೆ. ಮಂಜುನಾಥ್ ವಿ ಕಂದಕೂರ್ ಈ ಸಿನಿಮಾವನ್ನು ಡಾಲ್ಫಿನ್ ಎಂಟರ್‌ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಇದೊಂದು ಅಪ್ಪ ಮಗನ ಸಂಘರ್ಷದ ಕಥೆಯಾಗಿದ್ದು, ತಂದೆಯ ಪಾತ್ರದಲ್ಲಿ ಅಚ್ಯುತ್ ಕುಮಾರ್ ನಟಿಸಿದ್ದಾರೆ. ಜೊತೆಗೆ ಚಿತ್ರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ವಿಷಯವನ್ನು ಹೇಳಲಾಗಿದೆ.
ಈಗಾಗಲೇ ಚಿತ್ರದ ಹಾಡುಗಳು ಮತ್ತು ಟ್ರೇಲರ್ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿದ್ದು ಸಿನಿಮಾ ಮೇಲೆ ನೀರೀಕ್ಷೆ ಮೂಡುವಂತೆ ಮಾಡಿದೆ. ಈ ಮೊದಲು ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಷನ್ನಲ್ಲಿ ರೀಲೀಸ್ ಆಗಿದ್ದ ’ಕೌಶಲ್ಯ ಸುಪ್ರಜಾ ರಾಮ’ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಆ ಕಾರಣದಿಂದಲೂ ಈ ಪ್ಯಾನ್ ಇಂಡಿಯಾ ಚಿತ್ರದ ಮೇಲೆ ಪ್ರೇಕ್ಷಕರು ತುಂಬಾ ಭರವಸೆ ಇಟ್ಟುಕೊಂಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 