‘ವಿಕಲಚೇತನ ಮಕ್ಕಳಿಗೆ ಮಕ್ಕಳ ಕಾಯ್ದೆಗಳ ಕುರಿತು ಅರಿವು ಮೂಡಿಸಬೇಕು’
'Children with disabilities should be made aware of children's laws'
ಗದಗ 07: ಕಳೆದ 03 ವರ್ಷಗಳ ಅವಧಿಯಲ್ಲಿ ಅರಿವು ಕಾರ್ಯಕ್ರಮಗಳ ಬೇರೆ ಬೇರೆ ಇಲಾಖೆಗೆ ಮಕ್ಕಳ ಹಕ್ಕುಗಳ ಕುರಿತು ಹಾಗೂ ಕಾಯ್ದೆಗಳ ಕುರಿತು ತರಬೇತಿ ನೀಡುವುದರ ಮೂಲಕ ಆಯೋಗ ಯಶಸ್ವಿಗೊಂಡಿದೆ. ರಾಜ್ಯದ 31 ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಮಾಡಲಾಗಿರುತ್ತದೆ. ಗ್ರಾಮ ಮಟ್ಟದಲ್ಲಿ ವಿಕಲಚೇತನ ಮಕ್ಕಳಿಗೆ ಮಕ್ಕಳ ಕಾಯ್ದೆಗಳ ಕುರಿತು ಅರಿವು ಮೂಡಿಸಬೇಕು ಎಂದು ಶೇಖರಗೌಡ ರಾಮತ್ನಾಳ, ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳ್ರರು ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗದಗ ಇವರ ಸಹಯೋಗದಲ್ಲಿ ದಿ.07 ರಂದು ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಗಿಖಘ, ಗಖಘ ್ಘ ಒಖಘ ಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿಕಲಚೇತನ ಮಕ್ಕಳ ಮೇಲೆ ದೌರ್ಜನ್ಯ ಆಗುವುದನ್ನು ತಡೆಯಬೇಕು. ಮುಂದುವರೆದು ಮಕ್ಕಳಿಗಾಗಿ ಇರುವ ಕಾಯ್ದೆಗಳಾದ ಪೊಕ್ಸೋ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಕಳ್ಳ ಸಾಗಾಣಿಕೆ ಈ ಎಲ್ಲಾ ಕಾಯ್ದೆಗಳ ವ್ಯಾಪಕ ಪ್ರಚಾರಗೊಳ್ಳಬೇಕು.
ಗ್ರಾಮ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆಯಾಗಿರುವ ಬಗ್ಗೆ ಹಾಗೂ 5ಅ ಅನುದಾನ ಬಳಕೆ ಕುರಿತು ಗಿಖಘ, ಗಖಘ ್ಘ ಒಖಘ ಇವರು ಈ ಕಾಯ್ದೆಗಳ ಬಗ್ಗೆ ತಿಳಿದುಕೊಂಡಿರಬೇಕು. ನೀವು ಕೂಡಾ ಸಮಿತಿಯ ಸದಸ್ಯರಾಗಿದ್ದಿರಿ ಇದನ್ನು ತಿಳಿದಿರಬೇಕು. ಗ್ರಾಮ ಪಂಚಾಯತಿ ಕಾವಲು ಸಮಿತಿಯ ಬಗ್ಗೆ ತಿಳಿದುಕೊಳ್ಳಬೇಕು. 18 ವರ್ಷದೊಳಗಿನ ಮಕ್ಕಳಿಗೆ ಯು.ಡಿ.ಐ.ಡಿ ಕಾರ್ಡ ಸೌಲಭ್ಯ ತಲುಪಿಸುವ ಬಗ್ಗೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಹೋಗುವ ರೀತಿಯಲ್ಲಿ ಗಮನಹರಿಸಬೇಕು. ನಗರ ವ್ಯಾಪ್ತಿಯಲ್ಲಿ ಯು.ಡಿ.ಐ.ಡಿ ಕಾರ್ಡ ಇದೆಯೋ, ಇಲ್ಲವೂ ಅನ್ನುವ ಕುರಿತು ಪರೀಶೀಲಿಸಿಕೊಳ್ಳಬೇಕು. ಪಂಚಾಯತಿ ಮಟ್ಟದಲ್ಲಿ ಕೆಲಸ ಮಾಡುವುದು, ಪಂಚಾಯತ್ ಸೌಲಭ್ಯ ಯೋಜನೆಗಳು ಸಾರ್ವಜನಿಕರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಸಿ.ಎನ್ ಶೀಧರ್, ಮಾನ್ಯ ಜಿಲ್ಲಾಧಿಕಾರಿಗಳು, ಗದಗ ಇವರು ಕಾರ್ಯಕ್ರವನ್ನು ಉದ್ದೇಶೀಸಿ ಮಾತನಾಡುತ್ತಾ “ದಯವೇ ಧರ್ಮದ ಮೂಲವಯ್ಯ” ಅನ್ನುವ ರೀತಿಯಲ್ಲಿ ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ವಿಕಲಚೇತನ ಮಕ್ಕಳಿಗಾಗಿ ಇರುವ ಕಾಯ್ದೆಗಳನ್ನು ತಿಳಿದು, ಅದರಂತೆ ಕಾರ್ಯನಿರ್ವಹಿಸಲು ಹಾಗೂ ಅಂತಹ ಮಕ್ಕಳನ್ನು ಗುರುತಿಸಿ ಸೇವಾ ಸೌಲಭ್ಯ ಒದಗಿಸುವ ಕಾರ್ಯ ಮಾಡಬೇಕು ಮತ್ತು ನಿಮಗೆ ಏನಾದರು ತೊಂದರೆಯಾದರೆ ನಿಮ್ಮ ಸಹಾಯ ಸಹಕಾರಕ್ಕೆ ಸದಾ ಜಿಲ್ಲಾಡಳಿತ ಭವನ ಸದಾ ಬದ್ಧವಾಗಿರುತ್ತದೆ ಎಂದು ಹೇಳಿದರು.
ಹರೀಶ ಜೋಗಿ, ಸಂಯೋಜಕರು, ಯುನಿಸೆಫ್, ಕೊಪ್ಪಳ ಇವರು ಮಕ್ಕಳ ರಕ್ಷಣಾ ಕಾಯ್ದೆಗಳ ಗಿಖಘ, ಗಖಘ ್ಘ ಒಖಘ ಗಳಿಗೆ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು. ನಂತರ ಕಾರ್ಯಕ್ರಮದಲ್ಲಿ ಶೇಖರಗೌಡ ರಾಮತ್ನಾಳ, ಮಾನ್ಯ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಸಿ.ಎನ್ ಶೀಧರ, ಮಾನ್ಯ ಜಿಲ್ಲಾಧಿಕಾರಿಗಳು, ಗದಗ, ರೋಹನ ಜಗದೀಶ, ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಗದಗ, ಸಿ.ಎಸ್ ಶಿವನಗೌಡ್ರ, ಮಾನ್ಯ ಸದಸ್ಯರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ ಜಯದೇವಿ ಕವಲೂರು, ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿ, ಗದಗ, ಪದ್ಮಾವತಿ ಜಿ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ, ಡಾ. ಶಶಿಧರ ಚನ್ನಪ್ಪಗೌಡ್ರ, ಮಾನ್ಯ ವಿಭಾಗೀಯ ನಿಂತ್ರಣಾಧಿಕಾರಿಗಳು, ವಾ.ಕ.ರ.ಸಾ.ಸಂಸ್ಥೆ, ಗದಗ ಹಾಗೂ ರಫೀಕಾ ಹಳ್ಳೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗದಗ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಮತ್ತು ಮಲ್ಲಪ್ಪ ಹೊಸಳ್ಳಿ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 