‘ಗಣೇಶ ಉತ್ಸವಕ್ಕೆ ಡಿಜೆ ಬಳಸುವಂತಿಲ್ಲ: ಸಿಪಿಐ ಹನಮಂತ ಸಣಮನಿ
'DJs cannot be used for Ganesh festival': CPI's Hanamantha Sanamani
ಬೀಳಗಿ 14: ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ದಿನದ ಮೆರವಣಿಗೆಯಲ್ಲಿ ಡಿಜೆ ಬಳಸುವಂತಿಲ್ಲ ಸಮಯ ಪಾಲನೆ ಮಾಡಬೇಕು. ಒಂದು ವೇಳೆ ಡಿಜೆ ಬಳಸಿರುವುದು ಕಂಡು ಬಂದರೆ ತಕ್ಷಣವೇ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ಹನಮಂತ ಸಣಮನಿ ಹೇಳಿದರು.
ಸ್ಥಳೀಯ ಪೋಲಿಸ್ ಠಾಣಾ ಕಚೇರಿಯಲ್ಲಿ ಬುಧವಾರ ನಡೆದ ಗಣೇಶ ಉತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹತ್ವದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ‘ಮುಂಬರುವ ಗಣೇಶ ಉತ್ಸವವನ್ನು ತಾಲ್ಲೂಕಿನಾದ್ಯಂತ ಪರಿಸರ ಸ್ನೇಹಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೌಹಾರ್ದದಿಂದ ಆಚರಿಸಬೇಕು’ ಎಂದು ತಿಳಿಸಿದರು. ತಹಶೀಲ್ದಾರ್ ವಿನೋದ ಹತ್ತಳ್ಳಿ ಮಾತನಾಡಿ ‘ತಾಲ್ಲೂಕಿನಲ್ಲಿ ಪಿಒಪಿ ಹಾಗೂ ರಾಸಾಯನಿಕ ಬಣ್ಣ ಹೊಂದಿರುವ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹ, ಮಾರಾಟ ನಿಷೇಧಿಸಬೇಕು. ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಬಳಸಬೇಕು. ನದಿ , ಹಳ್ಳ, ಕೆರೆ, ಬಾವಿ ಇವುಗಳ ನೀರು ಮಾಲಿನ್ಯವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಸ್ಥಳೀಯ ಸಿದ್ದೇಶ್ವರ ಜಾತ್ರೆಯನ್ನು ಭಾವೈಕ್ಯತೆಯಿಂದ ಆಚರಿಸಬೇಕು. ವಾಹನಗಳಲ್ಲಿ ಜಾತ್ರೆಗೆ ಆಗಮಿಸುವ ಭಕ್ತರು ಸಿದ್ದೇಶ್ವರ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಹಾಗೂ ರುದ್ರಗೌಡ ಪಾಟೀಲ್ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಪಟ್ಟಣ ಪಂಚಾಯತ ಅಧ್ಯಕ್ಷ ಮುತ್ತು ಬೊರ್ಜಿ, ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಸದಸ್ಯರಾದ ರಾಜು ಬೊರ್ಜಿ, ಅಜ್ಜುಬಾಯಿ ಸರ್ಕಾರ, ಸಿದ್ದು ಸಾರಾವರಿ, ಡಿಎಸ್‌ಎಸ್ ಮುಖಂಡ ಮಾಹಾದೇವ ಹಾದಿಮನಿ,ಯಲ್ಲಪ್ಪ ಮೇಟಿ, ಶ್ರೀಶೈಲ ಜೋಗೆನ್ನವರ, ಸೋಮು ಕೂಗಟಿ ಇದ್ದರು. ಬೀಳಗಿ ಪೋಲಿಸ್ ಠಾಣಾ ಕಚೇರಿಯಲ್ಲಿ ಬುಧವಾರ ನಡೆದ ಗಣೇಶ ಉತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಉದ್ದೇಶಿಸಿ ಸಿಪಿಐ ಎಚ್.ಬಿ.ಸಣಮನಿ ಮಾತನಾಡಿದರು.
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ 