‘ಸಿಎಂ ಬದಲಾವಣೆ ಚರ್ಚೆಯಿಂದ ಅಭಿವೃದ್ಧಿ ಕುಂಠಿತ’
'Development is being hampered by the discussion on changing the CM'
ಕಲಬುರಗಿ: ಕಳೆದ ಹಲವು ದಿನಗಳಿಂದ ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆ ಚರ್ಚೆ ಒಟ್ಟಾರೆಯಾಗಿ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆರೋಪ ಮಾಡಿದರು.
ನಗರದಲ್ಲಿ ಕೋಲಿ ಸಮಾಜ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಎಲ್ಲ ರೀತಿಯ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ನೇರವಾಗಿ ಆರೋಪಿಸಿದರು.
ಸಿಎಂ ಬದಲಾವಣೆ ಮಾಡುವುದಾದರೆ ಕಾಂಗ್ರೆಸ್ ಹೈಕಮಾಂಡ್ ಜನರಿಗೆ ಮತ್ತು ರಾಜ್ಯದ ಅಭ್ಯುದಯಕ್ಕಾಗಿ ಉತ್ತಮ ವೇದಿಕೆಯನ್ನು ಕಲ್ಪಿಸಿ ಕೊಡಬೇಕು. ಇಲ್ಲದೇ ಹೋದರೆ ಹಾಲಿ ಇರುವ ಮುಖ್ಯಮಂತ್ರಿಗಳು ತಮ್ಮ ಪದ ಭಾರವನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡು ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಕಡೆಗೆ ಗಮನ ಕೊಡಬೇಕು ಎಂದು ಕಿಚಾಯಿಸಿದರು. ಅದನ್ನು ಬಿಟ್ಟು ಕಳೆದ ಒಂದು ತಿಂಗಳಿಂದ ಮುಖ್ಯಮಂತ್ರಿಗಳ ಬದಲಾವಣೆ ಮಾಡಲಾಗುವುದು. ಅವರಾಗುತ್ತಾರೆ, ಇವರಾಗುತ್ತಾರೆ, ಎನ್ನುವ ರಾಜಕೀಯದ ಮಧ್ಯೆ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ದಾರಿ ತಪ್ಪಿದೆ ಎಂದರು.
ಈ ಮಧ್ಯೆ ಡ್ರಗ್ಸ್ ಹಾವಳಿಯಿಂದಾಗಿ ಇಡೀ ಕರ್ನಾಟಕದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಗೃಹ ಮಂತ್ರಿಗಳು ಈ ವಿಚಾರದಲ್ಲಿ ತಮಗೆ ಸಂಪೂರ್ಣ ಸ್ವಾತಂತ್ರವಿದೆ, ಪೊಲೀಸರಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಹೇಳಿದ್ದರು ಕೂಡ, ಅನ್ಯ ರಾಷ್ಟ್ರದ ಪೊಲೀಸರು ಕರ್ನಾಟಕದ ರಾಜಧಾನಿಯಲ್ಲಿ ಬಂದು ಡ್ರಗ್ಸ್ ಹಾವಳಿಯನ್ನು ಮಟ್ಟ ಹಾಕುವ ಮಟ್ಟಕ್ಕೆ ಹೋಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಆರೋಪಿಸಿದರು.
ಡ್ರಗ್ಸ್ ಮಾಫಿಯಾ ಜಾಲವನ್ನು ಮಟ್ಟ ಹಾಕುವಲ್ಲಿ ರಾಜ್ಯದ ಪೊಲೀಸರು ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು ಆರೋಪಿಸಿ ಹಲವು ಮನೆಗಳನ್ನು ನೆಲಸಮ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿದರು ಕೂಡಲೇ ಮುಖ್ಯಮಂತ್ರಿಗಳು ಈ ಸಂಬಂಧ ಪಕ್ಕ ನಿರ್ಣಯವನ್ನು ಕೈಗೊಂಡು ಜನರಿಗೆ ಆಶ್ರಯ ಪುನಃ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 