‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನ ; ಸಸಿಗಳ ನೆಡುವ ಕಾರ್ಯ ಯಶಸ್ವಿ
'Ek Pede Maa Ke Naam' campaign; Sapling planting successful
ರನ್ನ ಬೆಳಗಲಿ 1: ಪರಿಸರ ಸಂರಕ್ಷಣೆ ಹಾಗೂ ಹಸೀರೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನವನ್ನು ನಾಗರಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಿಜ್ಞಾನ ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯ ಮಹತ್ವವನ್ನು ವಿವರಿಸಿದರು. ಈ ಅಭಿಯಾನದ ಮೂಲಕ ವಿದ್ಯಾರ್ಥಿಗಳು ತಮ್ಮ ತಾಯಿಯ ಹೆಸರಿನಲ್ಲಿ ಗಿಡಗಳನ್ನು ನೆಟ್ಟು, ಪರಿಸರ ಸಂರಕ್ಷಣೆಗೆ ವೈಯಕ್ತಿಕ ಜವಾಬ್ದಾರಿಯನ್ನು ತೋರಿದರು.
ಒಟ್ಟು ಸುಮಾರು 210 ಸಸಿಗಳನ್ನು ವಿದ್ಯಾರ್ಥಿಗಳು ತಮ್ಮ ಮನೆ ಆವರಣ, ಶಾಲಾ ಆವರಣ ಹಾಗೂ ಖಾಲಿ ಜಾಗಗಳಲ್ಲಿ ನೆಟ್ಟಿದ್ದಾರೆ. ಪ್ರತಿದಿನ ಅವುಗಳನ್ನು ಪೋಷಿಸಿ ಬೆಳೆಸುವ ಹೊಣೆಗಾರಿಕೆಯನ್ನು ಕೂಡ ವಿದ್ಯಾರ್ಥಿಗಳು ವಹಿಸಿಕೊಂಡಿದ್ದಾರೆ.
ಮುಖ್ಯೋಪಾಧ್ಯಾಯರು ಮಾತನಾಡಿ, ತಾಯಿ ಪ್ರೀತಿ ಹಾಗೂ ಪ್ರಕೃತಿ ಸಂರಕ್ಷಣೆ ಎರಡೂ ಜೀವನಕ್ಕೆ ಅತ್ಯಂತ ಅಗತ್ಯವಾದವು. ಇಂತಹ ಅಭಿಯಾನಗಳು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವ ಜೊತೆಗೆ ಭವಿಷ್ಯದಲ್ಲಿ ಹಸಿರು ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ ಎಂದು ಹೇಳಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಯಶಸ್ವಿಯಾಗಿ ನೆರವೇರಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 