90ರ ಕಾಲಘಟ್ಟದ ರೆಟ್ರೊ ಶೈಲಿ ಚಿತ್ರ 'ಎಲ್ರ ಕಾಲೆಳಿಯತ್ತೆ ಕಾಲ'
ಟ್ರೇಲರ್‌ನಲ್ಲೇ ಗಮನ ಸೆಳೆದ ಚಂದನ್ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಏಪ್ರಿಲ್ 17ರಂದು ಸಿನಿಮಾ ತೆರೆಗೆ
ಗೋಕುಲ ಎಂಟರ್ಟೈನರ್ಸ್ ಬ್ಯಾನರ್‌ನಲ್ಲಿ ಉಷಾ ಗೋವಿಂದರಾಜು ನಿರ್ಮಿಸಿರುವ ಹಾಗೂ ಸುಜಯ್ ಶಾಸ್ತ್ರಿ ನಿರ್ದೇಶನದ 'ಎಲ್ರ ಕಾಲೆಳಿಯತ್ತೆ ಕಾಲ' ಸಿನಿಮಾ ಬಿಡುಗಡೆಗೆ ದಿಣಗಣನೆ ಆರಂಭವಾಗಿದ್ದು, ಇದೇ ಏಪ್ರಿಲ್ 17ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೇಲರ್ ಕಳೆದವಾರ ರೀಲೀಸ್ ಆಗಿ ಪ್ರೇಕ್ಷಕರಿಂದ ಪ್ರಶಂಸೆ ಪಡೆಯುತ್ತಿದೆ. 90ರ ಕಾಲಘಟ್ಟದ ರೆಟ್ರೊ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್‌ನಲ್ಲಿ ಚಂದನ್ ಶೆಟ್ಟಿ ಲುಕ್‌ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.
ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ ಸುಜಯ್ ಶಾಸ್ತ್ರಿ, 'ಮೊದಲಿಗೆ ಕೇಳಿದನ್ನೆಲ್ಲಾ ಕೊಟ್ಟು ಒಂದೊಳ್ಳೆ ಚಿತ್ರ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಧನ್ಯವಾದ. ರಿಯಾಲಿಟಿ ಶೋ ವೊಂದರಲ್ಲಿ ಚಂದನ್ ಶೆಟ್ಟಿ ಅವರನ್ನು ನೋಡಿದ ನನಗೆ ನಮ್ಮ ಕಥೆಗೆ ಇವರು ಸೂಕ್ತ ನಾಯಕ ಎಂದೆನಿಸಿತು. ನಂತರ ಚಂದನ್ ಶೆಟ್ಟಿ ಅವರಿಗೆ ನನ್ನ ಗೆಳೆಯ ರಾಜಗುರು ಹೊಸಕೋಟೆ ಬರೆದಿರುವ ಈ ಚಿತ್ರದ ಕಥೆ ಹೇಳಿದ್ದೆವು. ಚಂದನ್ ಅಭಿನಯಿಸಲು ಒಪ್ಪಿದರು. ಚಿತ್ರೀಕರಣಕ್ಕೂ ಮುನ್ನ ಪೂರ್ವತಯಾರಿ ನೀಡಲಾಯಿತು. ಈ ಚಿತ್ರಕ್ಕಾಗಿ ಚಂದನ್ ಬಹಳ ಶ್ರಮ ಪಟ್ಟಿದ್ದಾರೆ. ನಾಯಕಿ ಅರ್ಚನಾ ಕೊಟ್ಟಿಗೆ ಸಹ ಉತ್ತಮವಾಗಿ ಅಭಿನಯಿಸಿದ್ದಾರೆ. ಎಲ್ಲರ ಮನಸ್ಸಿಗೂ ಹತ್ತಿರವಾಗುವಂತಹ ಕಥೆಯನ್ನು ರಾಜಗುರು ಹೊಸಕೋಟೆ ಬರೆದಿದ್ದಾರೆ. ಪ್ರವೀಣ್ - ಪ್ರದೀಪ್ ಸುಮಧುರ ಸಂಗೀತ ನೀಡಿದ್ದಾರೆ. ತಂತ್ರಜ್ಞರ ಕಾರ್ಯ ವೈಖರಿ ಹಾಗೂ ಸಹ ಕಲಾವಿದರ ನಟನೆ ಸೊಗಸಾಗಿದೆ. ಏಪ್ರಿಲ್ 17 ನಮ್ಮ ಚಿತ್ರ ತೆರೆಗೆ ಬರುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ' ಎಂದರು.
ನಾನು ಈ ಚಿತ್ರದಲ್ಲಿ ನಟಿಸಲು ಮೊದಲ ಕಾರಣ ಕಥೆ. ಅಂತಹ ಅದ್ಭುತ ಕಥೆ ಇದು. ಇಂತಹ ಚಿತ್ರವನ್ನು ದಯವಿಟ್ಟು ಎಲ್ಲರೂ ನೋಡಿ ಗೆಲ್ಲಿಸಬೇಕು. ನಾಯಕನಾಗಿ ಇದು ನನ್ನ ಮೊದಲ ಚಿತ್ರ. ಸುಜಯ್ ಶಾಸ್ತ್ರಿ, ರಾಜಗುರು ಹೊಸಕೋಟೆ ಅವರೆಲ್ಲಾ ರಂಗಭೂಮಿ ಹಿನ್ನೆಲೆಯವರು. ಅವರು ಒಂದು ರೀತಿ ಶಾಲೆ ಇದ್ದ ಹಾಗೆ. ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ. ಟ್ರೇಲರ್ ಗೆ ನೀರೀಕ್ಷೆಗೂ ಮೀರಿ ಮೆಚ್ಚುಗೆ ಸಿಕ್ಕಿದೆ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡುವ ಒಂದೊಳ್ಳೆ ಚಿತ್ರ ಇದೇ ಹದಿನೇಳರಂದು ನಿಮ್ಮ ಮುಂದೆ ಬರಲಿದೆ. ಕನ್ನಡಿಗರಿಂದ ಕನ್ನಡಿಗರಿಗಾಗಿಯೇ ಮಾಡಿರುವ ಈ ಕನ್ನಡ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ' ಎಂದರು ನಾಯಕ ಚಂದನ್ ಶೆಟ್ಟಿ. 'ಸುಜಯ್ ಶಾಸ್ತ್ರಿ ಅವರ 'ಗುಬ್ಬಿ ಮೇಲೆ ಬ್ರಹ್ಮಾಸ್ತ್ರ' ಚಿತ್ರ ನೋಡಿದ ಮೇಲೆ ಅವರ ನಿರ್ದೇಶನದಲ್ಲಿ ಚಿತ್ರವನ್ನು ನಿರ್ಮಿಸುವ ಆಸೆಯಾಯಿತು. ರಾಜಗುರು ಅವರು ಹೇಳಿದ ಕಥೆ ಇಷ್ಟವಾಯಿತು. ನಂತರ ಈ ಚಿತ್ರ ನಿರ್ಮಾಣವಾಯಿತು. ಇದೇ ಏಪ್ರಿಲ್ 17 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಕೆ.ವಿ.ಎನ್ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದೆ' ಎಂದು ನಿರ್ಮಾಪಕ ಗೋವಿಂದರಾಜು ಹೇಳಿದರು.
ಕಾಲದ ಮಹತ್ವ ಸಾರುವ ಕಥೆಯಿದು ಎಂದು ಕಥೆಯ ಬಗ್ಗೆ ರಾಜಗುರು ಹೊಸಕೋಟೆ ಮಾಹಿತಿ ನೀಡಿದರು. ತಮ್ಮ ಪಾತ್ರ ಚೆನ್ನಾಗಿದೆ ಎಂದು ನಾಯಕಿ ಅರ್ಚನಾ ಕೊಟ್ಟಿಗೆ ಹೇಳಿದರು. ಚಿತ್ರದಲ್ಲಿ ನಟಿಸಿರುವ ಮಂಜು ಪಾವಗಡ, ಮಾಹಂತೇಶ್, ಅನಂತ ಪದ್ಮನಾಭ ಹಾಗೂ ಸಂಗೀತ ನಿರ್ದೇಶಕ ಪ್ರದೀಪ್ ಚಿತ್ರದ ಕುರಿತು ಮಾತನಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 