‘ಪ್ರತಿಯೊಬ್ಬರೂ ಸ್ವಯಂ ಜನಗಣತಿಯಲ್ಲಿ ಭಾಗವಹಿಸಬೇಕು’
'Everyone should participate in the census themselves'
ಲೋಕದರ್ಶನ ವರದಿ
ಜಮಖಂಡಿ 02: ಪ್ರತಿಯೊಬ್ಬರೂ ಸ್ವಯಂ ಜನಗಣತಿಯಲ್ಲಿ ಭಾಗವಹಿಸಬೇಕು. ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಜನಗಣತಿ 2027ರ ಅಂಗವಾಗಿ ಸ್ವಯಂ ಗಣನೆ ಪ್ರಕ್ರಿಯೆಯನ್ನು 2026ರ ಏಪ್ರಿಲ್ 1ರಿಂದ ಏಪ್ರಿಲ್ 15 ರವರೆಗೆ ನಡೆಸಲಾಗುತ್ತದೆ. ಈ ಸಮಯದಲ್ಲಿ ಸರ್ಕಾರದ ಅಂತರ್ಜಾಲದಲ್ಲಿ ಸ್ವಯಂ ಆಗಿ ಜನರು ತಮ್ಮ ವಿವರವನ್ನು ನೀಡಬಹುದು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಕುಟುಂಬವು ತಮ್ಮ ಮನೆಯ ಮಾಹಿತಿಯನ್ನು ನಿಖರವಾಗಿ ಮತ್ತು ಸಂಪೂರ್ಣವಾಗಿ ಸ್ವಯಂ ಗಣನ ವ್ಯವಸ್ಥೆಯ ಮೂಲಕ ಸಲ್ಲಿಸಬೇಕು. ಈ ಪ್ರಕ್ರಿಯೆ ಸರಿಯಾದ, ಪಾರದರ್ಶಕ ಹಾಗೂ ಸಮಯೋಚಿತ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿಯಾಗುತ್ತದೆ, ಇದು ಭವಿಷ್ಯದ ಯೋಜನೆ ಮತ್ತು ಅಭಿವೃದ್ಧಿಗೆ ಬಹಳ ಮುಖ್ಯವಾಗಿದೆ. ಮಹತ್ವದ ರಾಷ್ಟ್ರೀಯ ಕಾರ್ಯದಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ. ಆದ್ದರಿಂದ ಎಲ್ಲಾ ಕುಟುಂಬಗಳು ಸರ್ಕಾರದಿಂದ ನಿಗದಿ ಮಾಡಿದ ಅವಧಿಯೊಳಗೆ ಅಂತರಜಾಲವನ್ನು ಬಳಸಿ ಸ್ವಯಂ ಗಣನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ವಿನಂತಿಸಲಾಗಿದೆ. ಗಣತಿದಾರರು ಮನೆಗಳಿಗೆ ಬಂದಾಗ ನೀಡುವ ಗಣತಿ ಐಡಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 