ಯು-ಎ ಪ್ರಮಾಣ ಪತ್ರದೊಂದಿಗೆ ಸೆನ್ಸಾರ್ ಪಾಸಾದ 'ಗತವೈಭವ'
'Gatavaibhav' passes censor board with U-A certificate
ಸೇರ್ವೇಗಾರ ಸಿಲ್ವರ್ ಸ್ಕ್ರೀನ್ಸ್ ಮತ್ತು ಸುನಿ ಸಿನಿಮಾಸ್ ಬ್ಯಾನರ್‌ನಲ್ಲಿ ದೀಪಕ್ ಹಾಗೂ ಸಿಂಪಲ್ ಸುನಿ ನಿರ್ಮಾಣ ಮಾಡಿರುವ ಬಹು ನೀರೀಕ್ಷಿತ 'ಗತವೈಭವ' ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ನವೆಂಬರ್ 14ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಣೆ ಮಾಡಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು-ಎ 16+ ಪ್ರಮಾಣ ಪತ್ರ ನೀಡಿದೆ. ಈಗಾಗಲೇ ಟೀಸರ್ ಹಾಡುಗಳಿಂದ ಪ್ರೇಕ್ಷಕರ ಮನಸು ಗೆದ್ದಿದ್ದ ಗತವೈಭವ ಈಗ ಟ್ರೇಲರ್‌ನಿಂದ ಮತ್ತಷ್ಟು ಹುಮ್ಮಸ್ಸು ತಂದಿದೆ ಚಿತ್ರತಂಡದಲ್ಲಿ. ಇದೊಂದು ಸಂಪೂರ್ಣ ಪ್ರೇಮಕಥೆ ಚಿತ್ರ. ಜೊತೆಗೆ ಪ್ಯಾಂಟಸಿ ಹಾಗು ಸನಾತನ ಧರ್ಮದ ಕಥೆಯನ್ನು ಈ ಸಿನಿಮಾದಲ್ಲಿ ಸುನಿ ಅವರು ಕಟ್ಟಿಕೊಟ್ಟಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ನ್ನು ನಟ ಕಿಚ್ಚ ಸುದೀಪ್ ರೀಲೀಸ್ ಮಾಡುವ ಮೂಲಕ ತಂಡಕ್ಕೆ ಸಾಥ್ ನೀಡಿದ್ದಾರೆ. ಇದಕ್ಕೂ ಮೊದಲು ಚಿತ್ರದ ಒಂದು ಗೀತೆಯನ್ನು ಶಿವಣ್ಣ ಬಿಡುಗಡೆ ಮಾಡಿದ್ದರು. ಈ ಚಿತ್ರದ ನಾಯಕನಾಗಿ ಗಾಂಧಿನಗರಕ್ಕೆ ಅಡಿ ಇಡುತ್ತಿದ್ದಾರೆ ಯುವ ಪ್ರತಿಭೆ ದುಷ್ಯಂತ್. ಇವರಿಗೆ ನಾಯಕಿಯಾಗಿ ಬಹು ಭಾಷಾ ನಟಿ ಆಶಿಕಾ ರಂಗನಾಥ್ ಬಣ್ಣ ಹಚ್ಚಿದ್ದಾರೆ. ವಿಕ್ರಂತ್ ರೋಣ ಖ್ಯಾತಿಯ ವಿಲಿಯಂ ಡೇವಿಡ್ ಕ್ಯಾಮೆರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 