ಕೊಪ್ಪಳದಲ್ಲಿ ಮೊದಲ ಬಾರಿಗೆ ಗಜಲ-ಗೀತೆ ಸಂಗೀತ ಸಂಜೆ
'Ghazal-Geethe' Musical Evening in Koppal for the First Time
ಕೊಪ್ಪಳ, 27: ನಗರದ ಸಾಹಿತ್ಯ ಭವನದಲ್ಲಿ ಆ. 28ರಂದು ಶುಕ್ರವಾರ ಸಂಜೆ 6.30ಕ್ಕೆ ಫಿದೋಸ್ ಸಾಂಸ್ಕೃತಿಕ ಕ್ರೀಡಾ ಹಾಗೂ ತರಬೇತಿ ಸಂಸ್ಥೆ, ಕೊಪ್ಪಳ ವತಿಯಿಂದ ಇದೇ ಮೊದಲ ಬಾರಿಗೆ ಗೀತ್ ಮತ್ತು ಗಜಲ್ ಮನಮುಟ್ಟುವ ಸುಮಧುರ ಗಾಯನದೊಂದಿಗೆ ವಿನೂತನ ಕ್ಲಾಸಿಕಲ್ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ, ಹಿರಿಯ ವೈದ್ಯ ಡಾ. ಕೆ.ಜಿ. ಕುಲಕರ್ಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಜುಮ್ಮಣ್ಣವರ್, ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಸೈಯದ್ ಫೌಂಡೇಶನ್ ಅಧ್ಯಕ್ಷ ಕೆ.ಎಂ. ಸೈಯದ್, ನಗರಸಭೆಯ ಮಾಜಿ ಅಧ್ಯಕ್ಷ ಚಂದ್ರಶೇಖರ ಕೌಲೂರು,
ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜಂದಾರ್, ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದ ಭಾವಿ, ಶ್ರೀ ಅನ್ನಪೂರ್ಣೇಶ್ವರಿ ಆಸ್ಪತ್ರೆಯ ವೈದ್ಯೆ ಡಾ. ಕಸ್ತೂರಿ ಕರಮೂಡಿ, ನಾಗರತ್ನ ಸೇವಾ ಮತ್ತು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ. ಅನಿಲ್ ಕುಮಾರ್ ಬೇಗಾರ, ಲಯನ್ಸ್ ಕ್ಲಬ್ ಅಧ್ಯಕ್ಷ ಗವಿಸಿದ್ದಪ್ಪ ಮುದುಗಲ್, ಹಿರಿಯ ಪತ್ರಕರ್ತ ಎಂ. ಸಾಧಿಕ್ ಅಲಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನೀರೀಕ್ಷಕ ಎಂ. ಬದಿಯುದ್ದೀನ್ ಅಹ್ಮದ್ ನವೀದ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಎಂ.ಬಿ. ರಫಿಯುದ್ದೀನ್ ಅಹ್ಮದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗಜಲ್ ಹಾಗೂ ಗೀತ್ ಗಾಯನದ ಮೂಲಕ ಸಂಗೀತಾಸಕ್ತರಿಗೆ ವಿನೂತನ ಅನುಭವ ನೀಡುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ಲಾಸಿಕಲ್ ಸಂಗೀತದ ಸೊಗಡಿನೊಂದಿಗೆ ನಡೆಯಲಿರುವ ಈ ಸಂಗೀತ ಸಂಜೆ ಸಾರ್ವಜನಿಕರಿಗೆ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಫಿದೋಸ್ ಸಾಂಸ್ಕೃತಿಕ ಕ್ರೀಡಾ ಹಾಗೂ ತರಬೇತಿ ಸಂಸ್ಥೆಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 