' ಏನೂ ಗೊತ್ತಿಲ್ಲ': ಭಾರತದ ತಿರುಗೇಟಿಗೆ ಉತ್ತರ ನೀಡದೆ ನುಣುಚಿಕೊಂಡ ಟ್ರಂಪ್
'I don't know anything': Trump
ವಾಷಿಂಗ್ಟನ್ 06: ರಷ್ಯಾದೊಂದಿಗೆ ಭಾರತದ ಇಂಧನ ಸಂಬಂಧಗಳ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಟೀಕೆ ಮಾಡಿದ್ದರು. ಇದೀಗ ರಷ್ಯಾದಿಂದ ಯುರೇನಿಯಂ, ರಸಗೊಬ್ಬರ ಮತ್ತು ರಾಸಾಯನಿಕಗಳ ಅಮೆರಿಕದ ಆಮದಿನ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಅಮರಿಕ ಈಗಲೂ ಯುರೇನಿಯಂ ಮತ್ತು ರಸಗೊಬ್ಬರವನ್ನು ರಷ್ಯಾದಿಂದ ಖರೀದಿಸುತ್ತಿದೆ ಎಂಬ ಭಾರತದ ಮಾಡಿದ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂಬ ಪ್ರಶ್ನೆಗೆ
ನನಗೆ ಅದರ ಬಗ್ಗೆ ಏನೂ ಗೊತ್ತಿಲ್ಲ. ಈಗ ನೀವು ಹೇಳುತ್ತಿದ್ದೀರಿ, ಆ ಬಗ್ಗೆ ಪರಿಶೀಲಿಸಬೇಕು ಎಂದು ರಷ್ಯಾದಿಂದ ಅಮೆರಿಕ ರಾಸಾಯನಿಕ ವಸ್ತುಗಳ ಆಮದಿನ ಬಗ್ಗೆ ಭಾರತದ ಹೇಳಿಕೆಯನ್ನು ಎತ್ತಿ ತೋರಿಸುವ ಪ್ರಶ್ನೆಗೆ ಟ್ರಂಪ್ ನುಣುಚಿಕೊಳ್ಳುವ ರೀತಿಯಲ್ಲಿ ಉತ್ತರಿಸಿದ್ದಾರೆ.
ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಿದ ಬಳಿಕವೂ ಅಮೆರಿಕ ಶತಕೋಟಿ ಡಾಲರ್ ಮೌಲ್ಯದ ಇಂಧನ ಮತ್ತು ಎನ್‌ರಿಚ್ ಆಗಿರುವ ಯುರೇನಿಯಂ ಸೇರಿದಂತೆ ಹಲವು ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿದೆ. ರಷ್ಯಾದ ದಾಳಿಗೂ ಮೊದಲು ಭಾರೀ ಪ್ರಮಾಣದಲ್ಲಿ ಅಮೆರಿಕ ರಷ್ಯದಿಂದ ಆಮದು ಮಾಡಿಕೊಳ್ಳುತ್ತಿತ್ತು. ಆದರೆ ಈಗ ಪ್ರಮಾಣ ಕಡಿಮೆಯಾಗಿದ್ದರೂ ಆಮದು ಮುಂದುವರಿಯುತ್ತಿದೆ.
ಕಳೆದ ವಾರ ಟ್ರಂಪ್ ಭಾರತೀಯ ಸರಕುಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ ನಂತರ, ಭಾರತವು ರಷ್ಯಾದ ತೈಲವನ್ನು ನಿರಂತರವಾಗಿ ಖರೀದಿಸುತ್ತಿರುವುದಕ್ಕೆ ಅನಿರ್ದಿಷ್ಟ ದಂಡ ವಿಧಿಸಿದ ನಂತರ ಭಾರತ-ಅಮೆರಿಕ ನಡುವಿನ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚಾಗಿದೆ ಎನ್ನಬಹುದು.
ಎರಡೂ ದೇಶಗಳ ಮಧ್ಯೆ ಸುಂಕ ಸಮರವು ಎದ್ದಿದ್ದರೂ, ಪಾಕಿಸ್ತಾನ ವಿರುದ್ಧ ಭಾರತದ ಆರಪೇಷನ್ ಸಿಂದೂರ್ ನಂತರ ಭಾರತ- ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದೆ ಎಂದು ಟ್ರಂಪ್ ಪದೇ ಪದೇ ಹೇಳಿಕೊಂಡು ಬಂದಿದ್ದು ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಹತ್ತಿರವಾದಂತೆ ಕಾಣುತ್ತಿದ್ದಾರೆ.
ಭಾರತ ನಮಗೆ ಉತ್ತಮ ವ್ಯಾಪಾರ ಪಾಲುದಾರ ರಾಷ್ಟ್ರವಾಗಿಲ್ಲ ಎಂದಿರುವ ಡೊನಾಲ್ಡ್ ಟ್ರಂಪ್, ಮುಂದಿನ 24 ಗಂಟೆಗಳಲ್ಲಿ ಭಾರತದ ಮೇಲೆ ಮತ್ತಷ್ಟು ಸುಂಕವನ್ನು ಹೆಚ್ಚಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ರಷ್ಯಾದಿಂದ ತೈಲವನ್ನು ನಿರಂತರವಾಗಿ ಭಾರತ ಖರೀದಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 