ಜಿ.ಎಂ. ಕೋಟ್ಯಾಳ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಜಿ.ಎಂ. ಕೋಟ್ಯಾಳ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ  'Ideal Teacher' Award for G.M. Kotyal

ಜಿ.ಎಂ. ಕೋಟ್ಯಾಳ ಅವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ  

ಆಲಮಟ್ಟಿ 11: ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಆಲಮಟ್ಟಿಯ ರಾವಬಹದ್ದೂರ ಡಾ. ಫ.ಗು. ಹಳಕಟ್ಟಿ  ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಎಂ. ಕೋಟ್ಯಾಳ ಅವರಿಗೆ ‘ಆದರ್ಶ ಶಿಕ್ಷಕ ಪ್ರಶಸ್ತಿ-2026’ ನೀಡಿ ಗೌರವಿಸಲಾಯಿತು. ಗದಗ ನಗರದ ತೋಂಟದಾರ್ಯ ಮಠದ ಆವರಣದಲ್ಲಿ ಸೋಮವಾರ ನಡೆದ 2814ನೇ ಶಿವಾನುಭವ ಕಾರ್ಯಕ್ರಮ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಲಿಂಗಾಯತ ಪ್ರಗತೀಶೀಲ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತೋಂಟದ ಡಾ. ಸಿದ್ದರಾಮ ಮಹಾಸ್ವಾಮೀಜಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾಡೋಜ ಡಾ. ಚೆನ್ನವೀರ ಕಣವಿ ಅವರ ತಂದೆ ಲಿಂಗೈಕ್ಯ ಸಕ್ರೆಪ್ಪ ಕಣವಿ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.  ಜಿ.ಎಂ. ಕೋಟ್ಯಾಳ ಅವರು 1992ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 1994ರಲ್ಲಿ ಆಲಮಟ್ಟಿಯ ಎಂಎಚ್‌ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ಬಳಿಕ ಆರಿ​‍್ಬ.ಪಿ.ಜಿ. ಹಳಕಟ್ಟಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿ ರ್ವಹಿಸಿದರು. 2018ರಲ್ಲಿ ಇದೇ ಶಾಲೆಯ ಮುಖ್ಯೋ ಪಾಧ್ಯಾಯರಾಗಿ ಜವಾಬ್ದಾರಿ ವಹಿಸಿಕೊಂಡರು. ಮುಖ್ಯೋಪಾಧ್ಯಾಯರಾಗಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕೋಟ್ಯಾಳ ಅವರು ಸ್ಮಾರ್ಟ್‌ ಕ್ಲಾಸ್, ಕುಡಿಯುವ ನೀರು, ಶೌಚಾಲಯ, ಉತ್ತಮ ಆಸನ ವ್ಯವಸ್ಥೆ, ಬಿಸಿಯೂಟದ ಕೋಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಶ್ರಮಿಸಿದ್ದಾರೆ. ಶಾಲೆಯ ಹಳೆಯ ದಾಖಲೆಗಳನ್ನು ವ್ಯವಸ್ಥಿತವಾಗಿ ಸಂರಕ್ಷಿಸುವ ಜೊತೆಗೆ ಶಾಲಾ ಆವರಣದ ಸ್ವಚ್ಛತೆ ಹಾಗೂ ಹಸೀರೀಕರಣಕ್ಕೂ ಒತ್ತು ನೀಡಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಗಮನ ನೀಡಿರುವ ಅವರು ಪಠ್ಯ ಶಿಕ್ಷಣದ ಜತೆಗೆ ಸಾಮಾನ್ಯ ಜ್ಞಾನ, ವಿಜ್ಞಾನ-ತಂತ್ರಜ್ಞಾನ ಹಾಗೂ ನೈತಿಕ ಮೌಲ್ಯಗಳ ಬೋಧನೆಗೆ ಆದ್ಯತೆ ನೀಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಶಾಲೆ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸಿರುವುದು ಗಮನಾರ್ಹವಾಗಿದೆ.  

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜಿ.ಎಂ. ಕೋಟ್ಯಾಳ, ಪ್ರಶಸ್ತಿಯ ಗೌರವವನ್ನು ತಮ್ಮ ಸಹೋದ್ಯೋಗಿ ಶಿಕ್ಷಕರಿಗೆ, ಸಂಸ್ಥೆಯ ಆಡಳಿತ ಮಂಡಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಮರ​‍್ಿಸುವುದಾಗಿ ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಪ್ರೊ. ಶಿವಾನಂದ ಪಟ್ಟಣಶೆಟ್ಟರ ಅವರ ಮಾರ್ಗದರ್ಶನ ಹಾಗೂ ಶಿಕ್ಷಕರ ಸಹಕಾರದಿಂದ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಜಿ.ಎಸ್‌. ಪಾಟೀಲ, ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್‌. ಪಾಟೀಲ, ಮಾಜಿ ಸಚಿವ ಎಸ್‌.ಎಸ್‌. ಪಾಟೀಲ, ಶಿಕ್ಷಣ ತಜ್ಞ ಪ್ರೊ. ಎಸ್‌.ಎಸ್‌. ಪಟ್ಟಣಶೆಟ್ಟರ, ಲಿಂಗಾಯತ ಪ್ರಗತಿ ಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.