ಜೈಲುಗಳು ಶರಣರ ಅನುಭವ ಮಂಟಪವಾಗಲಿ
'Importance of Vachana Literature'
ಹಾವೇರಿ 20 : ಜೈಲುಗಳು ಶರಣರ ಅನುಭವ ಮಂಟಪಗಳಾಗಲಿ. ಸಾಹಿತ್ಯ ಸಂಪರ್ಕದಿಂದ ಕೈದಿಗಳು ಶರಣರಾಗಲಿ ಎಂದು ಶಿಗ್ಗಾವಿಯ ಚೆನ್ನಪ್ಪ ಕುನ್ನೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ನಾಗರಾಜ ಜಿ.ದ್ಯಾಮನಕೊಪ್ಪ ಆಶಿಸಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿಯ ಜಿಲ್ಲಾ ಕಾರಾಗೃಹದಲ್ಲಿ ಏರಿ್ಡಸಿರುವ ಸಾಹಿತ್ಯ ಕಮ್ಮಟದಲ್ಲಿ ಎರಡನೇ ದಿನವಾದ ಶುಕ್ರವಾರ ‘ವಚನ ಸಾಹಿತ್ಯದ ಮಹತ್ವ' ಕುರಿತು ಅವರು ಮಾತನಾಡಿದರು.
ಜಡತ್ವ ಸಮಾಜವನ್ನು ಜಂಗಮವಾಗಿಸಿದ ಅಲ್ಲದೆ ಜಾತಿ ವ್ಯವಸ್ಥೆ ಮುರಿದು ಸಮಾನತೆಯ ಸಮಾಜ ಕಟ್ಟಲು ಬಸವಾದಿ ಶರಣರು ಶ್ರಮಿಸಿದರು. ಸಮಾಜದ ಓನ್ನತ್ಯಕ್ಕೆ ಶ್ರಮಿಸಿದ ಬಸವಾದಿ ಶರಣರ ಆಶಯಕ್ಕೆ ಅನುಗುಣವಾಗಿ ಬದುಕಬೇಕಿದೆ ಎಂದು ಸಲಹೆ ನೀಡಿದರು.
‘ಕಲಬೇಡ ಕೊಲಬೇಡ ಹುಸಿಯ ನುಡಿಯಲುಬೇಡ' ಎಂದ ಬಸವಣ್ಣನವರ ವಚನದಂತೆ ಬೇಡಗಳನ್ನು ಅಳವಡಿಸಿಕೊಂಡರೆ ಸುಂದರ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಕಿವಿಮಾತು ಹೇಳಿದರು.
‘ಕನ್ನಡ ಕಾವ್ಯದಲ್ಲಿ ಸೌಹಾರ್ದ ನೆಲೆಗಳು' ಕುರಿತು ಸಾಹಿತಿ ಹೆಬಸೂರ ರಂಜಾನ್ ಮಾತನಾಡಿ, ತುಳಿದು ಬದುಕುವುದಕ್ಕಿಂತ ತಿಳಿದು ಬದುಕಬೇಕು. ತಿಳಿದು ಬದುಕಿದರೆ ಅಳಿದ ಮೇಲೂ ಉಳಿಯುತ್ತೇವೆ ಎಂದರು.
ಸೌಹಾರ್ದ ಎಂದರೆ ಮನುಷ್ಯತ್ವ. ಆದರೆ ಮನುಷ್ಯರನ್ನು, ಮನುಷ್ಯತ್ವವನ್ನು ಕೊಲ್ಲುವ ವ್ಯವಸ್ಥೆಯಲ್ಲಿದ್ದೇವೆ. ಇದಕ್ಕಾಗಿ ಸಾಹಿತ್ಯ ಓದಬೇಕು. ಸಾಹಿತ್ಯವು ಜ್ಞಾನದ ಜೊತೆಗೆ ವಿವೇಕವನ್ನು ಮತ್ತು ಮನುಷ್ಯತ್ವವನ್ನು ಕಲಿಸುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾದ ಗೊಟಗೋಡಿಯ ರಾಕ್ ಗಾರ್ಡನ್ ಕ್ಯುರೇಟರ್ ವೇದಾರಾಣಿ ದಾಸನೂರ ಮಾತನಾಡಿ, ಇನ್ನೊಬ್ಬರೊಂದಿಗೆ ಹೊಡೆದಾಡಲು ಜಿಮ್‌ಗೆ ಹೋಗಬೇಡಿ. ಹರೆಯ ಎಂದರೆ ಕುದಿಯಿದ್ದ ಹಾಗೆ. ಕುದಿಯದೆ ಕುದ್ದು ಆರಿದ ನೀರಿನ ಹಾಗೆ ಬದುಕಿರಿ ಎಂದರು.
ಕುಡಗೋಲು, ಕೊಡಲಿಗಳನ್ನು ಹೊಲದಲ್ಲಿ ಕೆಲಸ ಮಾಡಲು ಬಳಸಿ. ಯಾವುದೇ ಕಾರಣಕ್ಕೂ ಇನ್ನೊಬ್ಬರ ಕುತ್ತಿಗೆ ಕೊಯ್ಯಲು ಬಳಸಬೇಡಿ. ಮದ್ಯವ್ಯಸನಿಯಾಗದೆ ಹೊಸ ಬದುಕು ಕಟ್ಟಿಕೊಳ್ಳಿ ಎಂದು ತಿಳಿಸಿದರು.
ರೈತ ಹಾಗೂ ಕವಿ ಚಂಸು ಪಾಟೀಲ ಮಾತನಾಡಿ, ನಮ್ಮ ಜಮೀನಿಗೆ ಗೊಬ್ಬರ, ಓಷಧಿ ಹಾಕದೆ ಸಾವಯವ ಕೃಷಿಯಿಂದಾಗಿ ಖರ್ಚು ಕಡಿಮೆಯಾಗಿದೆ. ಬೀಜ, ಗೊಬ್ಬರ, ಓಷಧಿ ಖರೀದಿಸದೆ ಇರುವುದರಿಂದ ಬಂಡವಾಳ ಕಡಿಮೆ ಹಾಗೂ ಲಾಭ ಹೆಚ್ಚು. ಕೃಷಿ ಸಲುವಾಗಿ ಸಾಲ ಮಾಡದೆ ನೆಮ್ಮದಿಯಿಂದ ಇದ್ದೇನೆ ಎಂದು ಹೆಮ್ಮೆಯಿಂದ ಹೇಳಿದರು.
ಕೃಷಿಯಿಂದ ಲಾಭವಿಲ್ಲ ಎಂದು ಊರು ತೊರೆಯುವ ಯುವಕರು ಸಣ್ಣಪುಟ್ಟ ಕೆಲಸಗಳಿಗಾಗಿ ನಗರ ಸೇರುತ್ತಾರೆ. ಆದರೆ ಭೂಮಿತಾಯಿ ನಂಬಿ ಕೃಷಿ ಮಾಡಬೇಕು. ಇದರಿಂದ ಹಳ್ಳಿಗಳಲ್ಲಿ ಉಳಿಯಲು ಸಾಧ್ಯವಾಗುತ್ತದೆ ಎಂದರು.
ಜಾನಪದ ಕಲಾವಿದರಾದ ಬಸವರಾಜ ಶಿಗ್ಗಾಂವ್ ಮತ್ತು ಬಸವರಾಜ ಕರಡಿ ತತ್ವಪದಗಳನ್ನು ಹಾಡಿದರು.
ಸಾಹಿತ್ಯ ಕಮ್ಮಟದ ಸಂಚಾಲಕ ಗಣೇಶ ಅಮೀನಗಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಸಂಚಾಲಕ ಡಾ.ಮಲ್ಲಿಕಾರ್ಜುನ ಬಿ.ಮಾನ್ಪಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 