ಐಸಿಎಸ್‌ಇ, ಸಿಬಿಎಸ್‌ಇ, ಐಬಿಐಜಿಸಿಎಸ್ ಸಂಸ್ಥೆಗಳಲ್ಲಿ ಕಡ್ಡಾಯ ಭಾಷಾ ಕಲಿಕೆಗೆ ಒತ್ತು ನೀಡಲು ಸೂಚನೆ: ಸಚಿವ ಎಸ್ ಮಧು ಬಂಗಾರಪ್ಪ
'Instructions to emphasize compulsory language learning in ICSE, CBSE, IBIGCS institutions'
ಬೆಳಗಾವಿ ಸುವರ್ಣ ವಿಧಾನಸೌಧ ಡಿ.16: ಐಸಿಎಸ್‌ಇ, ಸಿಬಿಎಸ್‌ಇ, ಐಬಿಐಜಿಸಿಎಸ್ ಹಾಗೂ ಇನ್ನೀತರ ಪಠ್ಯಕ್ರಮ ಬೋಧಿಸುವ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಭಾಷಾ ಕಲಿಕೆಗೆ ಒತ್ತು ನೀಡಲು ಸೂಚನೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು.
ಪರಿಷತ್ತಿನಲ್ಲಿ ಪ್ರಶ್ನೊತ್ತರ ವೇಳೆ ಸದಸ್ಯರಾದ ಎನ್ ರವಿಕುಮಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಭಾಷಾ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷಾ ಕಲಿಕಾ ಅಧಿನಿಯಮವನ್ನು ಪಾಲಿಸದ ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಆನೇಕಲ್ ತಾಲೂಕಿನ ದೊಮ್ಮಸಂದ್ರದ ದಿ ಬೆಂಗಳೂರು ಇಂಟೆರ್ ಶಾಲೆ ಮತ್ತು ದೊಡ್ಡಕಣ್ಣಹಳ್ಳಿಯ ಇನೋವೆಟೀವ್ ಶಾಲೆಯ ಮೇಲೆ ನಿಯಮಾನುಸಾರ ದಂಡ ವಿದಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಕನ್ನಡ ಭಾಷಾ ಕಲಿಕಾ ಅಧಿನಿಯಮ 2015ನ್ನು 2015ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಕನ್ನಡ ಭಾಷಾ ಕಲಿಕಾ ನಿಯಮಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ 2017ನೇ ಸಾಲಿನಲ್ಲಿ ರೂಪಿಸಿ ಜಾರಿಗೊಳಿಸಲಾಗಿದೆ.ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ, ಕನ್ನಡ ಭಾಷಾ ಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷಾ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆಯನ್ನು ನೀಡಲಾಗುತ್ತಿದೆ.ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಶಾಲೆಗಳು ಇತರ ಪಠ್ಯಕ್ರಮಕ್ಕೆ ಸಂಯೋಜನೆ ಹೊಂದಲು ನಿರಾಕ್ಷೇಪಣ ಪತ್ರಕ್ಕೆ ಮನವಿ ಸಲ್ಲಿಸುವಾಗ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸುವುದಾಗಿ ಮುಚ್ಚಳಿಕೆ ಪತ್ರ ಸಲ್ಲಿಸಿ, ಕನ್ನಡ ಕಲಿಕಾ ಅಧಿನಿಯಮವನ್ನು ಪಾಲಿಸುವುದಾಗಿ ಪ್ರಮಾಣಿಕರಿಸಿದಲ್ಲಿ ಮಾತ್ರ, ಸದರಿ ಶಾಲೆಗಳಿಗೆ ಕನ್ನಡ ಭಾಷಾ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ನಿರಾಕ್ಷೇಪಣ ಪತ್ರ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 