ಮಲ್ಲನಗೌಡ ಬಿರಾದಾರ ಅವರಿಗೆ ಈಶ್ವರೀಯ ಸೇವಾ ರತ್ನ ಪ್ರಶಸ್ತಿ ಪ್ರದಾನ
'Ishwariya Seva Ratna' Award Conferred Upon Mallanagouda Biradar
ದೇವರಹಿಪ್ಪರಗಿ 02 : ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮಲ್ಲನಗೌಡ ಬಿರಾದಾರ ಅವರಿಗೆ ಸಮಾಜಮುಖಿ ಸೇವೆಯನ್ನು ಗುರುತಿಸಿ ಈಶ್ವರೀಯ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಜಕ್ಕೂರು ಕೇಂದ್ರದಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ಹತ್ತು ಕೋಟಿ ವ್ಯಸನ ಮುಕ್ತಿ ಅಭಿಯಾನ ಹಾಗೂ ಈಶ್ವರೀಯ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಲ್ಲನಗೌಡ ಬಿರಾದಾರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಸಚಿವರಾದ ಆರಿ್ಬ. ತಿಮ್ಮಾಪುರ, ಕುಮಾರ ಬಂಗಾರ್ಪ ಹಾಗೂ ರಾಜಯೋಗಿನಿ ಲೀಲಾ ಅಕ್ಕನವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.
ಬ್ರಹ್ಮಕುಮಾರಿ ಸಂಸ್ಥೆಯು ಮಲ್ಲನಗೌಡ ಬಿರಾದಾರ ಅವರ ಸಮಾಜಮುಖಿ ಸೇವೆ, ಜನಸಂಪರ್ಕ, ಮಾನವೀಯ ಮೌಲ್ಯಗಳ ಪ್ರಚಾರ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ನೀಡುತ್ತಿರುವ ಸಹಕಾರವನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಮಹಿಮಾ ಪಟೇಲ್, ನವರಸ ನಟನೆ ಅಕಾಡೆಮಿ ಸಂಸ್ಥಾಪಕ ಎಂ. ಶ್ರೀನಿವಾಸ, ಮುಖಂಡ ಬಿ.ಡಿ. ಪಾಟೀಲ, ಪವಿತ್ರ ಅಕ್ಕನವರು ಸೇರಿದಂತೆ ಬ್ರಹ್ಮಕುಮಾರಿ ಸಂಸ್ಥೆಯ ಸದಸ್ಯರು, ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 