ನದಿಹರಳಹಳ್ಳಿ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಯಶಸ್ವಿ
'Janaspandana' programme successful in Nadiharalahalli village
ರಾಣೇಬೆನ್ನೂರು 11 : ತಾಲೂಕಿನ ನದಿಹರಳಹಳ್ಳಿ ಗ್ರಾಮ ಪಂಚಾಯಿತಿಯು, ನದಿಹರಳಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜನಸ್ಪಂದನ ಉದ್ಘಾಟಿಸಿ ಮಾತನಾಡಿದ ಶಾಸಕ ಪ್ರಕಾಶ್ ಕೋಳಿವಾಡ, ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಪಡೆಯಲು ಮತ್ತು ಜನಸಾಮಾನ್ಯರಿಗೆ ಒದಗಿಸುವಲ್ಲಿ ಪಂಚಾಯಿತಿ ಸದಸ್ಯರು ಕಾರ್ಯಕರ್ತರು ಅಧಿಕಾರಿಗಳು ಸಮರ್ಕ ಮಾಹಿತಿ ಒದಗಿಸಬೇಕು ಎಂದರು.
ಜನಸ್ಪಂದನದಲ್ಲಿ ಹುಲಿಕಟ್ಟಿ, ನದಿಹರಳಲ್ಲಿ, ವಡೆರಾಯನಹಳ್ಳಿ , ಸೇರಿದಂತೆ ವಿವಿಧ ಗ್ರಾಮದ ನಾಗರಿಕರು ಗ್ರಾಮ ಸಮಸ್ಯೆಗಳು ಮತ್ತು ಅದರ ಪರಿಹಾರಕ್ಕೆ ತೆಗೆದುಕೊಳ್ಳುವ ಕ್ರಮಗಳ ಕುರಿತು ಗ್ರಾಮಸ್ಥರು ಬಹು ಚರ್ಚೆ ನಡೆಸಿದರು. ತಾಲೂಕ ಆಡಳಿತದ ತಹಸೀಲ್ದಾರ್ ಆರ್. ಹಚ್. ಭಗವಾನ ಅವರು ಗ್ರಾಮೀಣ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬರು ಸರಕಾರದಿಂದ ದೊರೆಯಬಹುದಾದ ಎಲ್ಲಾ ಯೋಜನೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಒದಗಿಸಬೇಕು.
ಜನಸಾಮಾನ್ಯರ ಕುಂದು ಕೊರತೆಗಳನ್ನು ನಿಭಾಯಿಸುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸೂಚಿಸಿದರು. ಶಾಸಕರ ಸಮ್ಮುಖದಲ್ಲಿ ಬಹು ಚರ್ಚಿತ ಸಭೆಯಲ್ಲಿ ಅನೇಕ ವರ್ಷಗಳಿಂದ ಜಟಿಲವಾಗಿದ್ದ ಅನೇಕ ಸಮಸ್ಯೆಗಳಲ್ಲಿ ಕೆಲವು ಸಮಸ್ಯೆಗಳಿಗೆ ವಿಧವಾ ವೇತನ, ಇಂದಿರಾ ವೃದ್ಧಾಪ ವೇತನ, ಸೇರಿದಂತೆ ಮತ್ತಿದ್ದರೆ ಯೋಜನೆಗಳ ಅರ್ಜಿಗಳನ್ನು ಪಡೆದು, ಸ್ಥಳದಲ್ಲಿಯೇ ಅರ್ಜಿ ಸ್ವೀಕರಿಸಿ ಪರಿಹಾರ ನೀಡಿ ಆದೇಶ ಪತ್ರವನ್ನು ವಿತರಿಸಿ ಗ್ರಾಮೀಣ ನಾಗರಿಕರ ಪ್ರೀತಿ ವಿಶ್ವಾಸಕ್ಕೆ ಶಾಸಕರು ಮತ್ತು ಆಡಳಿತ ಪಾತ್ರರಾದರು. ಕಾರ್ಯಕ್ರಮದಲ್ಲಿ ಸ್ವಾಕರವೇ ತಾಲೂಕ ಅಧ್ಯಕ್ಷ ಚಂದ್ರ್ಪ ಬಣಕಾರ, ಸರ್ಕಾರಿ ಇಲಾಖೆಗಳು ಗ್ರಾಮಸ್ಥರು ಪಂಚಾಯಿತಿ ಅಧಿಕಾರಿಗಳು ಈಗ ಗ್ರಾಮಗಳ ನಾಗರಿಕರು ಮುಖಂಡರು ಪಾಲ್ಗೊಂಡಿದ್ದರು.
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ 