‘ತಿಂಗಳ ಒಳಗಾಗಿ ಕನಕದಾಸ ಮೂರ್ತಿ ಪ್ರತಿಷ್ಠಾಪನೆ’
'Kanakadasa statue to be installed within a month'
ಲೋಕದರ್ಶನ ವರದಿ
ಹಾವೇರಿ 07 : ಆಂಧ್ರ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ಪುಣ್ಯಕ್ಷೇತ್ರ ತಿರುಪತಿಯಲ್ಲಿ ಇತ್ತೀಚೆಗೆ ಭಕ್ತಶ್ರೇಷ್ಠ ಕನಕದಾಸರ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಅದೇ ಮಾದರಿಯಲ್ಲಿ ಹಾವೇರಿಯ ಕಾಗಿನೆಲೆ ವೃತ್ತದಲ್ಲಿಯೂ ಕನಕದಾಸ ಮೂರ್ತಿ ಪ್ರತಿಷ್ಠಾಪನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕುರುಬ ಸಮುದಾಯದ ಮುಖಂಡರೂ ಆಗಿರುವ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ‘ಕುರುಬ ಸಮುದಾಯದ ಸಭೆ'ಯಲ್ಲಿ ಅವರು ಮಾತನಾಡಿದರು. ಭಕ್ತಿಯ ಮೂಲಕ ಸಮಾಜದ ಸುಧಾರಣೆಗೆ ಶ್ರಮಿಸಿದ ಕನಕದಾಸರನ್ನು, ಇಡೀ ದೇಶವೇ ಕೊಂಡಾಡುತ್ತದೆ. ಕನಕದಾಸರು ಹುಟ್ಟಿ-ಬೆಳೆದ ಹಾವೇರಿ ಜಿಲ್ಲೆಯಲ್ಲಿಯೂ ಅವರ ಹೆಸರನ್ನು ಮತ್ತಷ್ಟು ಅಜರಾಮರವಾಗಿಸಬೇಕಿದೆ. ಹಲವು ಕಡೆಗಳಲ್ಲಿ ಈಗಾಗಲೇ ಅವರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿಯೂ ಮೂರ್ತಿ ಬೇಕೆಂಬ ಕೂಗು ಈಗ ನನಸಾಗುತ್ತಿದೆ ಎಂದರು.
ಕಾಗಿನೆಲೆ ವೃತ್ತದಲ್ಲಿ ವಾಹನಗಳ ದಟ್ಟಣೆ ಹೆಚ್ಚಿದ್ದು, ಅಪಘಾತಗಳು ಆಗುತ್ತಿವೆ. ಮಧ್ಯದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಕಷ್ಟವಾಗುತ್ತದೆ. ಹೀಗಾಗಿ, ಕನಕ ಕುರಿ ಮತ್ತು ಉಣ್ಣೆ ನೇಕಾರರ ಸಹಕಾರಿ ಸಂಘಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಮೂರ್ತಿ ಇರಿಸಲಾಗುವುದು. ಮೂರ್ತಿ ಸಿದ್ಧಪಡಿಸಲು 10 ಲಕ್ಷ ರೂ., ಖರ್ಚಾಗಲಿದೆ. ವೃತ್ತದ ಅಭಿವೃದ್ಧಿಗೆ ನಗರಾಭಿವೃದ್ಧಿ ಪ್ರಾಧಿಕಾರವು 25 ಲಕ್ಷ ರೂ., ನೀಡಿದೆ. ಉಳಿದ ಕೆಲಸಗಳಿಗೆ 10 ಲಕ್ಷದಿಂದ 15ಲಕ್ಷ ರೂ., ಬೇಕಾಗಬಹುದು. ನಾನೂ 1 ಲಕ್ಷ ರೂ., ಕೊಡುತ್ತೇನೆ. ಎಲ್ಲರೂ ಕೈಲಾದಷ್ಟು ದೇಣಿಗೆ ನೀಡಿ, ಮೂರ್ತಿ ಪ್ರತಿಷ್ಠಾಪಿಸೋಣ ಎಂದರು.
ಕುರುಬ ಸಮುದಾಯದ ಮುಖಂಡರೂ ಆಗಿರುವ ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ ಮಾತನಾಡಿ, ಹಾವೇರಿಯ ಕಾಗಿನೆಲೆ ವೃತ್ತದಲ್ಲಿ ತಿಂಗಳ ಒಳಗಾಗಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು. ಇದಕ್ಕೆ ಸಮುದಾಯದ ಜನರು ಒಗ್ಗಟ್ಟಿನಿಂದ ಸಹಕಾರ ನೀಡಬೇಕು ಎಂದರು.
ಮೂರ್ತಿ ಪ್ರತಿಷ್ಠಾಪಿಸುವ ಅವಕಾಶ ಬಂದಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಕಾಗಿನೆಲೆ ಗುರುಪೀಠದಲ್ಲಿ ಈ ಬಾರಿ ಕನಕ ಜಯಂತಿ ಆಚರಿಸುವ ಜವಾಬ್ದಾರಿಯನ್ನು ಹಾವೇರಿ ತಾಲೂಕಿಗೆ ನೀಡಲಾಗಿದೆ. ಕಳೆದ ಬಾರಿ ರಾಣೆಬೆನ್ನೂರಿನವರು ಅದ್ಧೂರಿ ಆಚರಣೆ ಮಾಡಿದ್ದರು. ಈ ಬಾರಿ ನಾವೆಲ್ಲರೂ ದೇಣಿಗೆ ಸಂಗ್ರಹಿಸಿ ಅಭೂತಪೂರ್ವ ಆಚರಣೆ ಮಾಡೋಣ ಎಂದರು.
ಸಮುದಾಯದ ಮುಖಂಡರಾದ ಮಹಾದೇವಗೌಡ್ರ ಗಾಜೀಗೌಡ್ರ, ನಾಗರಾಜ ಆನ್ವೇರಿ, ಅಶೋಕ ಬಣಕಾರ, ಹನುಮಂತಗೌಡ್ರ ಗಾಜೀಗೌಡ್ರ, ಬಸಣ್ಣ ಕಂಬಳಿ, ಅಶೋಕ ಮುದಕಣ್ಣನವರ, ವಿಜಯಕುಮಾರ ಮುದಕಣ್ಣನವರ, ಬಸವರಾಜ ಕೋಟಿ ಹಾಗೂ ತಾಲೂಕಾ ಅಧ್ಯಕ್ಷ ವೀರಪಾಕ್ಷ ಹುಲ್ಲೂರ, ನಿಂಗಪ್ಪ ತುಕ್ಕಣ್ಣನವರ ಇತರರಿದ್ದರು.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 