ಜ.8ರಂದು ಧಾರವಾಡದಲ್ಲಿ 'ಲ್ಯಾಂಡ್ ಲಾರ್ಡ್'ನ ಹಾಡು ಬಿಡುಗಡೆ
ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಕೆ.ಎಸ್. ನಿರ್ಮಿಸಿರುವ ಬಹು ನೀರೀಕ್ಷಿತ 'ಲ್ಯಾಂಡ್ ಲಾರ್ಡ್' ಜನವರಿ 23ರಂದು ತೆರೆಕಾಣುತ್ತಿದೆ. 'ದುನಿಯಾ' ವಿಜಯ್ ಹಾಗೂ ರಚಿತಾ ರಾಮ್ ನಟನೆಯ ಈ ಚಿತ್ರವನ್ನು ಜಡೇಶ್ ಕೆ.ಹಂಪಿ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್, ಹಾಡುಗಳು ದೊಡ್ಡಮಟ್ಟದಲ್ಲಿ ಗೆದ್ದಿವೆ. ಅದರಲ್ಲೂ ಇತ್ತೀಚೆಗಷ್ಟೇ ಬಿಡುಗಡೆಯಾದ 'ನಿಂಗವ್ವ ...' ಹಾಡು ಚಿತ್ರದ ಮೈಲೇಜ್ ಹೆಚ್ಚಿಸಿದ್ದು, ಗಾಂಧಿನಗರದಲ್ಲಿ ನೀರೀಕ್ಷೆ ಹೆಚ್ಚಾಗಿದೆ. ಈಗ ಚಿತ್ರತಂಡ ಮತ್ತೊಂದು ಹಾಡು ಬಿಡುಗಡೆ ಮಾಡಲು ಮುಂದಾಗಿದೆ.
ಹೌದು ಇದೀಗ 'ಲ್ಯಾಂಡ್ ಲಾರ್ಡ್'ನ ರೊಮ್ಯಾಂಟಿಕ್ ಗೀತೆಯನ್ನು ಬಿಡುಗಡೆ ಮಾಡಲಾಗುತ್ತಿದೆ. ಇಂದು (ಜ.8) ಸಂಜೆ ಧಾರವಾಡದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರದ ವೇದಿಕೆಯಲ್ಲಿ 'ರೋಮಾಂಚಕ...' ಎಂಬ ಹಾಡನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಹಾಡಿನ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗುವ ನೀರೀಕ್ಷೆ ಇದೆ. ಈ ಗೀತೆಯಲ್ಲಿ ನಟ ವಿಜಯ್ ಪುತ್ರಿ ರಿತನ್ಯಾ ಹಾಗೂ ನವನಟ ಶಿಶಿರ್ ಬೈಕಾಡಿ ಕಾಣಿಸಿಕೊಂಡಿದ್ದಾರೆ. ನಾಗಾರ್ಜುನ ಶರ್ಮಾ ಸಾಹಿತ್ಯದ ಹಾಡನ್ನು ಸಂಚಿತ್ ಹೆಗ್ಡೆ ಹಾಗೂ ಹರ್ಷಿಕಾ ಹಾಡಿದ್ದಾರೆ. ಇದು ರೊಮ್ಯಾಂಟಿಕ್ ಹಾಡಾಗಿದ್ದು, ಯೂತ್‌ಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ತಂಡಕ್ಕಿದೆ. ಇನ್ನು ಈ ಚಿತ್ರದಲ್ಲಿ ವಿಜಯ್ ಜೊತೆ ರಾಜ್ ಬಿ ಶೆಟ್ಟಿ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ದಿ ರೂಲರ್ ಎಂಬ ಅವರ ಪಾತ್ರದ ಲುಕ್ ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ ಸಂಗೀತ, ಸ್ವಾಮಿ ಜೆ ಗೌಡ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನವಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 