ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ಆಶಾದೀಪವಾದ ’ಕಲಿಕಾ ಹಬ್ಬ’
'Learning Festival' a beacon of hope for children with learning disabilities
ಶಿರಹಟ್ಟಿ 28 : ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರೇರಣೆ, ಸಂತಸದಾಯಕ ಕಲಿಕೆ ಮತ್ತು ಪ್ರತಿಭಾ ಅನ್ವೇಷಣೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಛಬ್ಬಿ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ಶಿರಹಟ್ಟಿ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗುಡ್ಡದಪುರದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕೀ ನಾಯ್ಕ ಅವರು, “ಕಲಿಕಾ ಹಬ್ಬವು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ಆಶಾದೀಪವಾಗಿದೆ. ಮಕ್ಕಳ ಕಲಿಕಾ ಪ್ರತಿಭೆಯನ್ನು ಹೊರತರುವ ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಿರುವ ಈ ಹಬ್ಬ, ಮಕ್ಕಳಲ್ಲಿ ಕಲಿಕೆಯ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆಯಾಗುತ್ತದೆ,” ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉಪ ನಿರ್ದೇಶಕರಾದ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ ಅವರು ಮಾತನಾಡಿ, “ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದಾಯಕ ಕಲಿಕೆಯನ್ನು ಉತ್ತೇಜಿಸುವ ಜೊತೆಗೆ ಅವರಲ್ಲಿರುವ ಅಡಗಿದ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರ ‘ಎಫ್‌ಎಲ್‌ಎನ್ ಕಲಿಕಾ ಹಬ್ಬ’ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ,” ಎಂದು ಹೇಳಿದರು.ಡಯಟ್ ಉಪನ್ಯಾಸಕರಾದ ಎಚ್.ಬಿ. ರಡ್ಡೇರ ಅವರು ಮಾತನಾಡಿ, “ಪ್ರತಿಯೊಂದು ಮಗುವಿನಲ್ಲಿಯೂ ಕಲಿಕೆಯಲ್ಲಿ ವೈಯಕ್ತಿಕ ಭಿನ್ನತೆಗಳಿರುತ್ತವೆ.
ಹಿಂದುಳಿದ ಮಕ್ಕಳಿಗೆ ಸಂತಸದಾಯಕ ಹಾಗೂ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ಪರಿಕಲ್ಪನೆ ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ,” ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಸಿಆರ್ಿ ಗೀತಾ ಸರವಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಉಪ ನಿರ್ದೇಶಕರಾದ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ, ಬಿಇಒ ಎಚ್. ನಾಣಕೀ ನಾಯ್ಕ, ಡಯಟ್ ಉಪನ್ಯಾಸಕರಾದ ಎಚ್.ಬಿ. ರಡ್ಡೇರ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ, ಇಸಿಓ ಆರಿ್ಬ. ಪವಾರ, ಎಸ್ಡಿಎಂಸಿ ಅಧ್ಯಕ್ಷರಾದ ಕೃಷ್ಣಪ್ಪ ಲಮಾಣಿ, ಸದಸ್ಯರಾದ ರೂಪಾ ಲಮಾಣಿ, ಶೇಖಪ್ಪ ಲಮಾಣಿ, ಶಿಕ್ಷಣ ಪ್ರೇಮಿಗಳಾದ ದೀಪಕ್ ಲಮಾಣಿ, ಲಕ್ಷ್ಮಣ ಲಮಾಣಿ, ತಿಪ್ಪಣ್ಣ ಲಮಾಣಿ,
ಸಂಘದ ನಿರ್ದೇಶಕ ಮೋಹನ ಮಾಂಡ್ರೆ, ಬಿಆರ್ಿ ಬಿ.ಎಂ. ಯರಗುಪ್ಪಿ, ಛಬ್ಬಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಗೀತಾ ಸರವಿ, ಸಿಆರ್ಿ ಮಿತ್ರರಾದ ಆರ್. ಮಹಾಂತೇಶ, ಮುತ್ತು ಸಾವಿರಕುರಿ, ಉಮೇಶ್ ನೇಕಾರ, ಗೀರೀಶ್ ನೇಕಾರ, ಎನ್.ಎ. ಮುಲ್ಲಾ, ಕೆ.ಪಿ. ಕಂಬಳಿ, ಉಪ ಪ್ರಾಚಾರ್ಯ ಅರವಟಗಿ ಸೇರಿದಂತೆ ಛಬ್ಬಿ ಕ್ಲಸ್ಟರ್ನ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.ಕಲಿಕಾ ಹಬ್ಬದಲ್ಲಿ ವಿವಿಧ ಶೈಕ್ಷಣಿಕ ಸ್ಪರ್ಧೆಗಳು, ಸೃಜನಾತ್ಮಕ ಚಟುವಟಿಕೆಗಳು ಮತ್ತು ಕಲಿಕಾ ಪ್ರದರ್ಶನಗಳು ನಡೆಯಿತು. ಹಬ್ಬದ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ಪ್ರವಾಹಕ್ಕೆ ತರುವ ಪ್ರಯತ್ನ ಗಮನಾರ್ಹವಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 