ಬಳ್ಳಾರಿ,ಏ.25: ಕೋವಿಡ್-19ನ ಲಾಕ್ಡೌನ್ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ ಮಾರುಕಟ್ಟೆ ಸಮಸ್ಯೆ ಇದೆ ಅಂತ ಹೇಳಿಕೊಂಡು ಅಧಿಕಾರಿಗಳು ಸುಮ್ಮನಿರದೇ ರೈತರೊಂದಿಗೆ ಸಮನ್ವಯ ನಡೆಸಿ ಕಾರ್ಯಪ್ರವೃತ್ತರಾಗುವ ಕೆಲಸ ಮಾಡಬೇಕು;ಇಲ್ಲದಿದ್ದಲ್ಲಿ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಅವರು ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಹಿನ್ನೆಲೆ ಶನಿವಾರ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಂಜೂರು,ಸುಗಂಧಿ ಬಾಳೆಹಣ್ಣು, ಸಪೋಟಾ, ಪಪ್ಪಾಯ, ದಾಳಿಂಬೆ, ಸೀಬೆಹಣ್ಣು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆಯ ಬೆಳೆಗಳನ್ನು ಬೆಳೆದಿರುವ ರೈತರು ಈ ಲಾಕ್ಡೌನ್ ಸಂದರ್ಭದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಜನರೊಂದಿಗೆ ಸಮನ್ವಯ ನಡೆಸಿ ಅವರಿಗೆ ನೆರವಾಗುವ ಕೆಲಸ ಮಾಡಬೇಕೇ ವಿನಃ ಕುಂಟುನೆಪ ಹೇಳಿಕೊಂಡು ಸುಮ್ಮನೆಕುಳಿತುಕೊಳ್ಳುವುದಲ್ಲ ಎಂದು ಹೇಳಿದ ಅವರು ತೋಟಗಾರಿಕೆ ಬೆಳೆಗಳು ಮತ್ತು ದಾನಿಗಳ ಮಧ್ಯ ಕೊಂಡಿಯಾಗಿ, ಅಗತ್ಯವಿರುವೆಡೆ ಹಣ್ಣುಗಳನ್ನು ಕಳುಹಿಸುವ ವ್ಯವಸ್ಥೆ ಮಾಡಿ ಎಂದು ಸಲಹೆ ನೀಡಿದರು. ಇಡೀ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ತೋಟಗಾರಿಕೆ ಬೆಳೆಗಳು ಈ ಲಾಕ್ಡೌನ್ನಿಂದ ಸಮಸ್ಯೆ ಎದುರಿಸುತ್ತಿವೆ ಎಂಬುದರ ವಿವರವನ್ನು ಸಮೀಕ್ಷೆ ನಡೆಸಿ ನೀಡುವಂತೆ ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಭೋಗಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
*ಮುಂದಿನ ವಾರ 3.55 ಕೋಟಿ ರೂ. ಪರಿಹಾರದ ಹಣ ರೈತರ ಖಾತೆಗೆ: ಬಳ್ಳಾರಿ ಜಿಲ್ಲೆಯಲ್ಲಿ ಏ.7ರಿಂದ 21ರವರೆಗೆ ಸುರಿದ ಮಳೆ ಮತ್ತು ಗಾಳಿಯಿಂದ 3921.11 ಹೆಕ್ಟೇರ್ ಪ್ರದೇಶ ಹಾನಿಯಾಗಿದ್ದು,ಎನ್ಡಿಆರ್ಎಫ್ ಅನ್ವಯ 2543.01 ಹೆಕ್ಟೇರ್ ಜಮೀನಿನಲ್ಲಿ ಬೆಳೆದ ಬೆಳೆ ಹಾನಿಯಾಗಿದ್ದು, 3068 ರೈತರು ಇದರಿಂದ ಬಾಧಿತರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ತಿಳಿಸಿದರು.
ಸಿರಗುಪ್ಪ ತಾಲೂಕಿನಲ್ಲಿಯೇ 2039.27ಹೆಕ್ಟೇರ್ ಜಮೀನಿನಲ್ಲಿ ಬೆಳೆ ಹಾನಿಯಾಗಿದ್ದು 2163 ರೈತರು ಇದರಿಂದ ಬಾಧಿತರಾಗಿದ್ದಾರೆ. ಆ ತಾಲೂಕಿಗೆ 2.87 ಕೋಟಿ ರೂ. ಪರಿಹಾರ ಒದಗಿಸುವುದು ಸೇರಿದಂತೆ ಕಂಪ್ಲಿ,ಹಡಗಲಿ,ಹರಪನಳ್ಳಿ, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಒಟ್ಟು 3.55ಕೋಟಿ ರೂ. ಪರಿಹಾರದ ಹಣವನ್ನು ರೈತರ ಖಾತೆಗೆ ಮುಂದಿನ ವಾರದೊಳಗೆ ಜಮಾ ಮಾಡಲಾಗುವುದು ಎಂದು ಅವರು ವಿವರಿಸಿದರು.
ಬಳ್ಳಾರಿ ಜಿಲ್ಲೆ ರೆಡ್ಝೋನ್ ಹೆಚ್ಚಿನ ಮುಂಜಾಗ್ರತೆ ವಹಿಸಿ: ಕೋವಿಡ್ ವಿಷಯದಲ್ಲಿ ಬಳ್ಳಾರಿ ಜಿಲ್ಲೆ ರೆಡ್ಝೋನ್ನಲ್ಲಿರುವುದರಿಂದ ಹೆಚ್ಚಿನ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಹೊಟ್ಟೆಪಾಡಿಗೆ ದುಡಿಯಲು ವಿವಿಧೆಡೆ ತೆರಳಿದ್ದ 28ರಿಂದ 30 ಸಾವಿರ ಜನ ಕೂಲಿಕಾಮರ್ಿಕರು ಇದ್ದಾರೆ ಎಂಬ ಮಾಹಿತಿ ಇದ್ದು, ಅಂತವರ ಬಗ್ಗೆ ನಿಗಾವಹಿಸಬೇಕು ಮತ್ತು ಮನೆ-ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಮ್ಮು,ಶೀತ,ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಅವರ ಗಂಟಲು ದ್ರವ್ಯ ಸಂಗ್ರಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು. ಈಗಾಗಲೇ ಆ ರೀತಿ ಕ್ರಮವಹಿಸಲಾಗಿರುವುದನ್ನು ಡಿಸಿ ನಕುಲ್ ವಿವರಿಸಿದರು.
ಬಳ್ಳಾರಿ ಕೊರೊನಾ ಮುಕ್ತ ಶೀಘ್ರ: ಜಿಲ್ಲೆಯಲ್ಲಿ ಈಗಾಗಲೇ ಕೊರೊನಾದಿಂದ 3 ಜನರು ಗುಣಮುಖರಾಗಿದ್ದು,ಅವರನ್ನು ಬಿಡುಗಡೆ ಮಾಡಲಾಗಿದ್ದು, ಇನ್ನೂ ಮೂರು ಜನರು ಇನ್ನೂ ಎರಡು ದಿನದೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಉಳಿದವರ ಆರೋಗ್ಯದಲ್ಲಿಯೂ ಚೇತರಿಕೆ ಕಂಡುಬರುತ್ತಿದೆ ಎಂದು ಡಿಎಚ್ಒ ಡಾ.ಜನಾರ್ಧನ್ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ ಅವರು ಸಭೆಗೆ ವಿವರಿಸಿದರು.
ಇದನ್ನು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಇದೆಲ್ಲವನ್ನು ಗಮನಿಸುತ್ತಿದ್ದರೇ ಜಿಲ್ಲೆ ಶೀಘ್ರ ಕೊರೊನಾ ಮುಕ್ತ ಜಿಲ್ಲೆಯಾಗುವ ವಿಶ್ವಾಸವಿದೆ ಎಂದು ಹೇಳಿದ ಅವರು ಜಿಲ್ಲೆಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
*ಶೇ.93.21ರಷ್ಟು ಪಡಿತರ ವಿತರಣೆ: ಜಿಲ್ಲೆಯಲ್ಲಿ ರಾಜ್ಯ ಸರಕಾರದ ಏಪ್ರಿಲ್ ಮತ್ತು ಮೇ ಮಾಹೆಯ ಪಡಿತರವನ್ನು ಶೇ.93.21ರಷ್ಟು ವಿತರಣೆ ಮಾಡಲಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿದರ್ೇಶಕ ರಾಮೇಶ್ವರಪ್ಪ ಸಭೆಗೆ ವಿವರಿಸಿದರು.
594434 ಪಡಿತರ ಚೀಟಿಗಳಿದ್ದು,ಅದರಲ್ಲಿ 554089 ಜನರು ಪಡಿತರ ಪಡೆದುಕೊಂಡಿದ್ದಾರೆ.ಪೊರ್ಟಬಿಲಿಟಿಯಲ್ಲಿ 23669 ಜನರು ಪಡಿತರ ಪಡೆದುಕೊಂಡಿದ್ದಾರೆ. ಅಜರ್ಿ ಸಲ್ಲಿಸಿ ಪಡಿತರ ಕಾಡರ್್ಗಾಗಿ ಕಾಯುತ್ತಿದ್ದವರಿಗೂ ರಾಜ್ಯ ಸರಕಾರ ಪಡಿತರ ವಿತರಿಸುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅಜರ್ಿ ಸಲ್ಲಿಸಿದ 6865 ಜನರಲ್ಲಿ 1626ಜನರು ಪಡಿತರ ಪಡೆದುಕೊಂಡಿದ್ದಾರೆ ಎಂದು ಅವರು ವಿವರಿಸಿದರು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅಡಿಯ ಪಡಿತರವನ್ನು ಮೇ 1ರಿಂದ ವಿತರಿಸಲಾಗುವುದು ಎಂದರು. ಸಚಿವ ಆನಂದಸಿಂಗ್ ಅವರು ಪಡಿತರ ವಿಷಯದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 329743 ಲೀಟರ್ ಹಾಲು ಇದುವರೆಗೆ ವಿತರಿಸಲಾಗಿರುವುದನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಸಭೆಗೆ ವಿವರಿಸಿದರು.
ಕೊರೊನಾ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ವಿವಿಧ ಕ್ರಮಗಳನ್ನು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ, ಸಂಗಣ್ಣ ಕರಡಿ, ಶಾಸಕರಾದ ಸೋಮಶೇಖರ ರೆಡ್ಡಿ,ನಾಗೇಂದ್ರ, ಸೋಮಲಿಂಗಪ್ಪ, ಅಲ್ಲಂ ವೀರಭದ್ರಪ್ಪ, ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.