ರಾಮದುರ್ಗ: 'ಸುತ್ತಮುತ್ತಲಿನ ಪರಿಸರ ಸಂರಕ್ಷಣೆಯ ಜವಾಬ್ದಾರಿ ಪ್ರತಿ ತಾಯಂದಿರ ಮೇಲಿದೆ'

ಲೋಕದರ್ಶನ ವರದಿ

ರಾಮದುರ್ಗ 27:  ಪಾಲಕರು ತಮ್ಮ ಮಕ್ಕಳನ್ನು ಪೋಷಣೆ ಮಾಡುವ ಜೊತೆಗೆ ಅವರಿಗೆ ದೊರೆಯುವ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಜೊತೆಗೆ ತಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆಯ ಜವಾಬ್ದಾರಿ ಪ್ರತಿ ತಾಯಂದಿರ ಮೇಲಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ಸ್ಥಳೀಯ ತಾಲೂಕ ಪಂಚಾಯತ ಸಭಾ ಭವನದಲ್ಲಿ ಬುಧವಾರ ಶಿಶು ಅಭಿವೃದ್ಧಿ ಇಲಾಖೆಯು 516 ತಾಯಂದಿರಿಗೆ ಭಾಗ್ಯಲಕ್ಷ್ಮೀ ಬಾಂಡ್ ಮತ್ತು ಸಸಿ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಸ್ವಾರ್ಥಕ್ಕಾಗಿ ಗಿಡಮರಗಳ ಸಂಖ್ಯೆ ಕಡಿಮೆಯಾತ್ತಿದೆ. ಈಗಾಗಲೇ ಸಾಕಷ್ಟು ಅರಣ್ಯ ನಾಶದಿಂದ ಮಳೆ ಇಲ್ಲದೇ ಬರದ ಛಾಯೆ ಆವರಿಸಿದೆ. ತಾಯಂದಿರು ಮನಸ್ಸು ಮಾಡಿದರೆ ಒಂದೇ ವರ್ಷದಲ್ಲಿ ಸಾಕಷ್ಟು ಅರಣ್ಯವನ್ನು ಬೆಳೆಸಬಹುದಾಗಿದೆ ಎಂದು ಅಭಿಮತ ವ್ಯಕ್ತಪಡಿಸಿದ ಅವರು, ಬಡವರ ಮನೆಯಲ್ಲಿ ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಎಂಬ ಭಾವನೆ ಎದುರಾಗಿತ್ತು. ಆಗಿನ ಸಮ್ಮಿಶ್ರ ಸರಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಹೆಣ್ಣು ಭ್ರೂಣ ಹತ್ಯೆ ತಡೆಗೆ ಭಾಗ್ಯಲಕ್ಷ್ಮೀ ಬಾಂಡ್ವಿತರಣೆ ಮಾಡಿ ಬಡವರ ಜೀವನದಲ್ಲಿ ನೆಮ್ಮದಿ ಮೂಡುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದ ವೇಳೆಯಲ್ಲಿ ಅನುಷ್ಠಾನಗೊಳಿಸಿದ್ದ ಅನೇಕ ಯೋಜನೆಗಳನ್ನು ಕಾಂಗ್ರೇಸ್ ಸರಿಯಾಗಿ ಜಾರಿ ಮಾಡುತ್ತಿಲ್ಲ. ಭಾಗ್ಯಲಕ್ಷ್ಮೀ ಯೋಜನೆಯ ಬಾಂಡ್ಗಳನ್ನು ವಿತರಣೆ ಮಾಡಲು ಕಾಂಗ್ರೇಸ್ ಸರಕಾರ ಮುಂದಾಗುತ್ತಿಲ್ಲ. ಆ ವರ್ಷದ ಬಾಂಡ್ಗಳನ್ನು ಅದೇ ವರ್ಷದಲ್ಲಿ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಯಿಯ ಗರ್ಭದಲ್ಲಿ ಭ್ರೂಣ ಚಿಗುರುತಿದ್ದಂತೆ ಸರಕಾರ ಎಲ್ಲ ರೀತಿಯ ಸಹಾಯ ಮಾಡುತ್ತಿದೆ. ತಾಯಂದಿರು ಸಕರ್ಾರ ಮಾಡಿದ ಸಹಾಯ ಮತ್ತು ಅಂಗನವಾಡಿ ನೌಕರರು ನೀಡಿದ ಸಹಕಾರವನ್ನು ಎಂದೂ ಮರೆಯಬಾರದು. ಸರಕಾರ ಮತ್ತು ಕಾರ್ಯಕರ್ತರ ಋಣ ತೀರಿಸುವ ನಿಟ್ಟಿನಲ್ಲಿ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ ಸದಸ್ಯರಾದ ರೇಣಪ್ಪ ಸೋಮಗೊಂಡ, ಮಾರುತು ತುಪ್ಪದ, ತಾಲೂಕ ಪಂಚಾಯತ ಉಪಾಧ್ಯಕ್ಷೆ ಲಕ್ಷ್ಮವ್ವ ವಾರಿಮನಿ, ಆರೋಗ್ಯ ಶಿಕ್ಷಣಾಧಿಕಾರಿ ಐನಾಪೂರ ವೇದಿಕೆ ಮೇಲಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಖಾದರಬಿ ಲಕ್ಷ್ಮೇಶ್ವರ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.