'ಪಿ. ಚಿದಂಬರಂ ಚಾರಿತ್ರ್ಯಹರಣಕ್ಕೆ ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ'

ನವದೆಹಲಿ 21:             ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ನಿವಾಸದ ಮೇಲೆ ತನಿಖಾ ಸಂಸ್ಥೆಗಳು ನಡೆಸಿರುವ ದಾಳಿಯನ್ನು ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದಶರ್ಿ ಪ್ರಿಯಾಂಕಾ ವಾದ್ರಾ ಖಂಡಿಸಿದ್ದಾರೆ 

  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಮತ್ತು ಕೆಲ ಮಾಧ್ಯಮಗಳನ್ನು ಬಳಸಿಕೊಂಡು ಚಿದಂಬರಂ ಅವರ ಚಾರಿತ್ರ್ಯಹರಣಕ್ಕೆ ಮುಂದಾಗಿದೆ  ಅಧಿಕಾರದ ದುರ್ಬಳಕೆಯಾಗುತ್ತಿದ್ದು, ಇದನ್ನು ಬಲವಾಗಿ ಖಂಡಿಸುತ್ತೇನೆ ಎಂದು ರಾಹುಲ್ ಟ್ವಿಟರ್ ಮೂಲಕ ಕಿಡಿಕಾರಿದ್ದಾರೆ 

  ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯಸಭೆಯ ಗೌರವಾನ್ವಿತ ಸದಸ್ಯ, ವಿತ್ತ ಹಾಗೂ ಗೃಹಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ ಪಿ ಚಿದಂಬರಂ ನಿವಾಸದ ಮೇಲೆ ನಡೆದಿರುವ ಇಡಿ ಹಾಗೂ ಸಿಬಿಐ ದಾಳಿ ಖಂಡನೀಯ.  ಸತ್ಯ ಹೇಳುವ ಮೂಲಕ ಎನ್ ಡಿಎ ಸರ್ಕಾರದ ವೈಫಲ್ಯಗಳನ್ನು ಹೊರ ಹಾಕುತ್ತಿರುವ ಅವರ ವಿರುದ್ಧ ದಾಳಿಯ ಅಸ್ತ್ರ ಪ್ರಯೋಗಿಸುತ್ತಿರುವುದು ನಾಚಿಕೆಗೇಡಿನ ಸಂಗತಿ.  ಪರಿಣಾಮ ಏನೇ ಇರಲಿ, ಸತ್ಯ ಹೊರತರುವ ಸಲುವಾಗಿ ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. 

  ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ ಚಿದಂಬರಂ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ, ಅವರ ನಿವಾಸದ ಮೇಲೆ ಮಂಗಳವಾರ ಸಿಬಿಐ ಹಾಗೂ ಇಡಿ ದಾಳಿ ನಡೆಸಿದೆ  

  ಏತನ್ಮಧ್ಯೆ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಪಿ ಚಿದಂಬರಂ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ