ಮಹಿಳಾ ವಿವಿಯಲ್ಲಿ ನವೆಂಬರ್ 10 ರಂದು ‘ಫೋಟೋಗ್ರಫಿ ಕೌಶಲ್ಯಗಳ’ ಕಾರ್ಯಗಾರ
'Photography Skills' Workshop on November 10 at Women's University
ವಿಜಯಪುರ 05: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗವು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ನವೆಂಬರ್ 10 ರಂದು ‘ಫೋಟೋಗ್ರಫಿ ಕೌಶಲ್ಯಗಳ’ ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮವನ್ನು ಕನ್ನಡ ಸಭಾಭವನದಲ್ಲಿ ಹಮ್ಮಿಕೊಂಡಿದೆ.
ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಲಸಚಿವ ಶಂಕರಗೌಡ ಸೋಮನಾಳ ಮತ್ತು ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಉಪಸ್ಥಿತರಿರಲಿದ್ದು, ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ, ಬಾಗಲಕೋಟೆಯ ಪತ್ರಿಕಾ ಛಾಯಾಗ್ರಾಹಕ ಸಂಗಮೇಶ ಬಡಿಗೇರ ಹಾಗೂ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನಾ ನಿಗರ್ ಸುಲ್ತಾನ ಭಾಗವಹಿಸಲಿದ್ದಾರೆ. ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳು ಹಾಗೂ ವಿಜಯಪುರ ಜಿಲ್ಲೆಯ ವಿವಿಧ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು, ಪ್ರಾಧ್ಯಾಪಕರು, ಬೋಧಕ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯಾಗಾರದ ಸಂಯೋಜಕರಾದ ಸಂದೀಪ್ ಹಾಗೂ ಪ್ರೊ. ಜಿ.ಬಿ. ಸೋನಾರ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 