ಅಥರ್ಗಾದಲ್ಲಿ ಇಂದು ಪ್ರಜಾಸೇವಾ ಆಂದೋಲನ
'Praja Seva Andolana' in Atharga Today
ಇಂಡಿ 11: ತಾಲೂಕಿನ ಅಥರ್ಗಾ ಗ್ರಾಮದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಇಂದು ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಇಂಡಿ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ತಿಳಿಸಿದ್ದಾರೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ಆಧಾರ್ ಕಾರ್ಡ, ಪಡಿತರ ಚೀಟಿ ಹಾಗೂ ಮತದಾರರ ಗುರುತಿನ ಚೀಟಿಯ ನಕಲು ಪ್ರತಿಗಳೊಂದಿಗೆ ಆಗಮಿಸಿ, ನಿಗದಿತ ಅರ್ಜಿ ನಮೂನೆಯಲ್ಲಿ ಮನವಿ ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ತಿಳಿಸಿದ್ದಾರೆ.
ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಸೇರಿದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುವಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶವಿದೆ. ಇದಲ್ಲದೆ ವಸತಿ ಯೋಜನೆ, ನಿವೇಶನ ಮತ್ತು ಮನೆ ಹಂಚಿಕೆ, ಹೊಸ ಪಡಿತರ ಚೀಟಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಸಾರ್ವಜನಿಕರ ಕುಂದುಕೊರತೆಗಳನ್ನು ಸಭೆಯಲ್ಲಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 