‘ರೈಲ್ವೆ ಪ್ರಯಾಣ ದರ: ಬಿಜೆಪಿಗರೇ ಈಗ ಕೇಂದ್ರಕ್ಕೆ ಪ್ರಶ್ನಿಸಿ’
'Railway fares: BJP people, now question the Centre'
ದಾವಣಗೆರೆ: ರೈಲ್ವೆ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ಆಗಿರುವ ಈ ಹೊರೆಯನ್ನು ಬಿಜೆಪಿ ಮುಖಂಡರು ಪ್ರಶ್ನಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಈಚೆಗೆ ನಿಧನರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮಕ್ಕೆ ಶುಕ್ರವಾರ ನಗರಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
‘ರಾಜ್ಯ ಸರ್ಕಾರದ ವಿರುದ್ಧವಷ್ಟೇ ಮಾತನಾಡುವ ಬಿಜೆಪಿ ನಾಯಕರು, ರೈಲ್ವೆ ಪ್ರಯಾಣ ದರ ಏರಿಕೆಯಿಂದ ಜನರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ತುಟಿ ಬಿಚ್ಚುತ್ತಿಲ್ಲ’ ಎಂದು ಹರಿಹಾಯ್ದರು.
‘ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ (ಸಿಡಬ್ಲ್ಯೂಸಿ) ವರಿಷ್ಠರು ಕರೆದಿದ್ದಾರೆ. ಶನಿವಾರ ನಡೆಯುವ ಸಭೆಗೆ ಶುಕ್ರವಾರ ಸಂಜೆ ದೆಹಲಿಗೆ ಹೊರಟಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಭಾರಿ ಪೈಪೋಟಿ ನಡೆಯುತ್ತಿದೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ‘ಮಾಧ್ಯಮಗಳಿಗೆ ಸಿಎಂ ಕುರ್ಚಿ ಬಿಟ್ಟು ಬೇರೆ ವಿಚಾರಗಳೇ ಇಲ್ಲ’ ಎಂದು ಅಸಮಾಧಾನ ಹೊರಹಾಕಿದರು.
‘ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಬಸ್ ಅಗ್ನಿ ದುರಂತದಲ್ಲಿ ಲಾರಿ ಚಾಲಕನ ತಪ್ಪು ಇರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ತಿಳಿಸಿದರು.
‘ಬಸ್ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ತನಿಖೆ ಪೂರ್ಣಗೊಂಡ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 