’ರಾಯರ ದರ್ಶನ’ ಆಲ್ಬಂ ಸಾಂಗ್ ಬಿಡುಗಡೆ
'Rayara Darshan' album song released
ಜೂನ್ 20ರಂದು ಮಂತ್ರಾಲಯದ ರಾಯರ ಸನ್ನಿಧಿಯಲ್ಲಿ ’ರಾಯರ ದರ್ಶನ’ ಆಲ್ಬಂ ಸಾಂಗ್ ಬಿಡುಗಡೆ ಆಗಸ್ಟ್ ನಲ್ಲಿ ಖಿಓಋ ಮಾಧ್ಯಮ ಪ್ರಶಸ್ತಿ ಪ್ರದಾನಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ ಖ್ಯಾತರಾದ ಮಂತ್ರಾಲಯದ ಗುರು ಶ್ರೀರಾಘವೇಂದ್ರಸ್ವಾಮಿಗಳ ಕುರಿತು ಈವರೆಗೂ ಸಾಕಷ್ಟು ಭಕ್ತಿಗೀತೆಗಳು ಹಾಗೂ ಆಲ್ಬಂ ಸಹ ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಶೇಷ ವಿಷಯಗಳು ಹಾಗೂ ಮಂತ್ರಾಲಯದಲ್ಲಿ ರಾಯರಿಗೆ ವರ್ಷಾವಧಿ ನಡೆಯುವ ವಿಶೇಷ ಉತ್ಸವಗಳನ್ನು ಕಣ್ತುಂಬಿಕೊಳ್ಳುವ ’ರಾಯರ ದರ್ಶನ’ ಆಲ್ಭಂ ಬಿಡುಗಡೆಗೆ ಸಿದ್ದವಾಗಿದೆ.
ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಲಾಂಛನದಲ್ಲಿ ಸುಗುಣ ರಘು ನಿರ್ಮಾಣ ಮಾಡಿರುವ ಈ ಆಲ್ಬಂನ ಲೋಕಾರೆ್ಣ ಜೂನ್ 20ರಂದು ಮಂತ್ರಾಲಯದಲ್ಲಿ ಅದ್ದೂರಿಯಾಗಿ ನೆರವೇರಲಿದೆ. ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರ ದಿವ್ಯ ಸಾನಿಧ್ಯದಲ್ಲಿ ಹಾಗೂ ದೇಶದ ವಿವಿಧ ವಿಭಾಗದ ಗಣ್ಯರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ ಹಾಗೂ ಇದೇ ಸಂಸ್ಥೆಯಿಂದ ಮಾಧ್ಯಮದವರಿಗೆ ನೀಡಲಾಗುವ ’ಖಿಓಋ’ ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ನಲ್ಲಿ ನೆರವೇರಲಿದೆ. ಈ ಎರಡು ಸಮಾರಂಭಗಳ ಕುರಿತು ಮಾಹಿತಿ ನೀಡಲು ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.
ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆಯ ಮುಖ್ಯಸ್ಥರಾದ ರಘು ಭಟ್ ಹಾಗೂ ಸುಗುಣ ರಘು ಉಪಸ್ಥಿತರಿದ್ದರು. ’ರಾಯರ ದರ್ಶನ’ ಆಲ್ಬಂ ನ ಟೀಸರ್ ಅನ್ನು ಹಿರಿಯ ನಟಿ ತಾರಾ ಅನುರಾಧ ಅನಾವರಣ ಮಾಡಿದರು. ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು, ಮಹೇಶ್ ಗೌಡ, ಮಂತ್ರಾಲಯ ಮಠದ ಶ್ರೀನಿಧಿ ಕರಣಂ, ಶ್ರೀಶ ಜೋಯಿಸ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಆಲ್ಬಂ ಸಾಂಗ್ ಗೆ ಸಂಗೀತ ಸಂಯೋಜಿಸಿರುವ ಅಜನೀಶ್ ಲೋಕನಾಥ್, ಸಿ.ಆರ್.ಬಾಬಿ, ಹಾಡು ಬರೆದಿರುವ ನಾಗಾರ್ಜುನ ಶರ್ಮ ಹಾಗೂ ಗಾಯಕ ಅಬ್ಬಿ ವಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರ ಅಡಿದಾವರೆಗಳಿಗೆ ವಂದಿಸಿ ಮಾತು ಆರಂಭಿಸಿದ ಈ ಎರಡು ಕಾರ್ಯಕ್ರಮಗಳ ಸಾರಥ್ಯ ವಹಿಸಿರುವ ರಘು ಭಟ್, ’ರಾಯರ ದರ್ಶನ ಆಲ್ಬಂ ಸಾಂಗ್ ಅಂದುಕೊಂಡ ಹಾಗೆ ಮೂಡಿಬರಲು ಶ್ರೀರಾಘವೇಂದ್ರಸ್ವಾಮಿಗಳ ಹಾಗೂ ಶ್ರೀಸುಬಧೇಂದ್ರ ತೀರ್ಥರ ಪರಮಾನುಗ್ರಹವೆ ಕಾರಣ. ಈ ಆಲ್ಬಂ ಸಾಂಗ್ ನಿರ್ಮಾಣವಾಗಲು ಒಂದು ವರ್ಷ ಸಮಯ ಬೇಕಾಯಿತು. ಕಾರಣ, ಇದರಲ್ಲಿ ಮಂತ್ರಾಲಯದಲ್ಲಿ ನಡೆಯುವ ಪೂಜೆ ಹಾಗೂ ವೈಭವೋತ್ಸವ, ಆರಾಧನೆ ಮುಂತಾದ ಉತ್ಸವಗಳ ವಿವರಣೆ ಇದೆ. ಅಜನೀಶ್ ಲೋಕನಾಥ್ ಹಾಗೂ ಸಿ ಆರ್ ಬಾಬಿ ಅವರ ಅದ್ಭುತ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಆಲ್ಬಂ ಸಾಂಗ್ ಅನ್ನು ’ಕಾಂತಾರ’ ಸಿನಿಮಾದ ಬ್ರಹ್ಮಕಳಶ ಹಾಡಿನ ಖ್ಯಾತಿಯ ಅಬ್ಬಿ ವಿ ಹಾಡಿದ್ದಾರೆ. ನಾಗಾರ್ಜುನ ಶರ್ಮ ಬರೆದಿದ್ದಾರೆ. ಜೂನ್ 20 ರಂದು ಮಂತ್ರಾಲಯದ ರಾಯರ ಸನ್ನಿಧಿಯಲ್ಲೇ ’ರಾಯರ ದರ್ಶನ’ ಆಲ್ಬಂ ಸಾಂಗ್ ಅದ್ದೂರಿಯಾಗಿ ಅನಾವರಣವಾಗಲಿದೆ.
ಅಜನೀಶ್ ಲೋಕನಾಥ್ ಅವರ ಸಂಗೀತ ಸಂಜೆ ಕೂಡ ಅಂದು ಇರುತ್ತದೆ. ಮೂರು ರಾಜ್ಯಗಳ ಉಪ ಮುಖ್ಯಮಂತ್ರಿಗಳನ್ನು ಸಮಾರಂಭಕ್ಕೆ ಆಹ್ವಾನಿಸುವ ಪ್ರಯತ್ನ ನಡೆಯುತ್ತಿದೆ. ಇನ್ನೂ ನಮ್ಮ ಸಂಸ್ಥೆಯಿಂದ ಕಳೆದ ಒಂಭತ್ತು ವರ್ಷಗಳಿಂದ ವಿದ್ಯುನ್ಮಾನ ಮಾಧ್ಯಮದವರಿಗೆ ’ಖಿಓಋ’ ಪ್ರಶಸ್ತಿ ಕೊಡುತ್ತಾ ಬರುತ್ತಿದ್ದೇವೆ. ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ ಈ ಪ್ರಶಸ್ತಿ ಕೆಳದೆರೆಡು ವರ್ಷಗಳಿಂದ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಮಾಧ್ಯಮದವರನ್ನು ಗರುತಿಸಿಕೊಡಲಾಗುತ್ತಿದೆ. ಈ ಬಾರಿ ವಿದ್ಯುನ್ಮಾನ ಮಾಧ್ಯಮದ ಜೊತೆಗೆ ಮುದ್ರಣ ಮಾಧ್ಯಮದವರಿಗೂ ಸಹ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದೇವೆ. ಆಗಸ್ಟ್ ನಲ್ಲಿ ಬೆಂಗಳೂರಿನಲ್ಲೇ ಈ ಸಮಾರಂಭ ನಡೆಯಲಿದೆ. ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು. ಇಂದಿನ ಸಮಾರಂಭಕ್ಕೆ ಆಗಮಿಸಿದ ಗಣ್ಯರಿಗೆ ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ’ ಎಂದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 