‘ನಿಯಮಿತ ವ್ಯಾಯಾಮ, ಧ್ಯಾನದಿಂದ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ’
'Regular exercise and meditation can maintain mental health'
ಲೋಕದರ್ಶನ ವರದಿ
ನಗರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಮತ್ತು ಉದ್ಯೋಗಿಗಳಿಗೆ ಒತ್ತಡರಹಿತ ಜೀವನ ನಿರ್ವಹಣೆ ಕುರಿತು ಮಾಹಿತಿ ನೀಡಿದ ಡಾ. ಚಂದ್ರಶೇಖರ ಹಳಿಂಗಳೆ
ಕಾಗವಾಡ 31: ನಿಯಮಿತ ವ್ಯಾಯಾಮ, ಧ್ಯಾನ, ಸಕಾರಾತ್ಮಕ ಚಿಂತನೆ ಮತ್ತು ಸರಿಯಾದ ಸಮಯ ನಿರ್ವಹಣೆಯೊಂದಿಗೆ ಆಧುನಿಕ ಜೀವನ ಶೈಲಿಯಲ್ಲಿ ಹೆಚ್ಚುತ್ತಿರುವ ಒತ್ತಡವನ್ನು ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ಮಿರಜ್ ಪಟ್ಟಣದ ನಿರ್ಮಲ ಆಸ್ಪತ್ರೆ, ವ್ಯಸಮುಕ್ತಿ ಮತ್ತು ಪುನರ್‌ವಸತಿ ಕೇಂದ್ರದ ಸಂಸ್ಥಾಪಕ ಡಾ. ಚಂದ್ರಶೇಖರ ಹಳಿಂಗಳಿ ತಿಳಿಸಿದ್ದಾರೆ.
ಅವರು ಇತ್ತಿಚಿಗೆ ಮಹಾರಾಷ್ಟ್ರದ ಮಿರಜ್ ಪಟ್ಟಣದ ನಿರ್ಮಲ್ ಆಸ್ಪತ್ರೆ, ವ್ಯಸನಮುಕ್ತ ಮತ್ತು ಪುನರ್‌ವಸತಿ ಕೇಂದ್ರ ಮತ್ತು ಸಾಂಗಲಿ ಜಿಲ್ಲೆಯ ನಗರ ಯೋಜನಾ ಸಹಾಯಕ ನಿರ್ದೇಶಕರ ಕಚೇರಿ ಜಂಟಿಯಾಗಿ ಆಯೋಜಿಸಿದ್ದ ಒತ್ತಡ ನಿರ್ವಹಣೆ ಜೀವನದ ಕುರಿತು ವಿಶೇಷ ಶಿಬಿರದಲ್ಲಿ ಮಾತನಾಡುತ್ತಿದ್ದರು. ಒತ್ತಡದ ಕಾರಣಗಳು, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದರ ಪರಿಣಾಮಗಳು ಹಾಗೂ ಒತ್ತಡವನ್ನು ಕಡಿಮೆ ಮಾಡಲು ತೆಗೆದುಕೊಳ್ಳಬಹುದಾದ ವಿವಿಧ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಶಿಬಿರದಲ್ಲಿ ಹಾಜರಿದ್ದ ಅಧಿಕಾರಿಗಳು ಮತ್ತು ಉದ್ಯೋಗಿಗಳು ಡಾ. ಹಳಿಂಗಳೆ ಅವರಿಗೆ ವಿವಿಧ ಪ್ರಶ್ನೆಗಳನ್ನು ಕೇಳಿದರು. ಮತ್ತು ಒತ್ತಡ ನಿರ್ವಹಣೆಯ ಕುರಿತು ಮಾರ್ಗದರ್ಶನ ಪಡೆದರು.
ಈ ಸಂದರ್ಭದಲ್ಲಿ ನಗರ ಯೋಜನಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ನಿರ್ಮಲ್ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 