ಬೆಂಗಳೂರು, ನ 12 : ರೆಡ್ ಡ್ಯಾಗನ್ ಫಿಲಂಸ್ ಲಾಂಛನದಲ್ಲಿ ಮೋಹನ್ ಕುಮಾರ್, ಮೋಹನ್ ರೆಡ್ಡಿ ಹಾಗೂ ಚೇತನ್ ಅವರು ನಿರ್ಮಿಸಿರುವ 'ರಿಲ್ಯಾಕ್ಸ್ ಸತ್ಯ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನವೀನ್ ರೆಡ್ಡಿ ನಿರ್ದೇಶನದ ಈ ಚಿತ್ರಕ್ಕೆ ಆನಂದ್ ರಾಜವಿಕ್ರ ಸಂಗೀತ ನೀಡಿದ್ದಾರೆ, ಯೋಗಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ವಿಕ್ರಂ ಮೋರ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಸಂಭಾಷಣೆ ಬರೆದಿದ್ದಾರೆ ಪ್ರಭು ಮುಂಡ್ಕೂರ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಮಾನ್ವಿತ ಹರೀಶ್. ಉಗ್ರಂ ಮಂಜು, ಕಡ್ಡಿಪುಡಿ ಚಂದ್ರು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.