ಅಟಲ್‌ಜೀ ಮೃಗಾಲಯಕ್ಕೆ ‘ರೇವಾ’ ಗಂಡು ಹುಲಿ ನವ ಅತಿಥಿ
'Reva', a male tiger, is the new guest at Atalji Zoo
ಅಟಲ್‌ಜೀ ಮೃಗಾಲಯಕ್ಕೆ ‘ರೇವಾ’ ಗಂಡು ಹುಲಿ ನವ ಅತಿಥಿ
ವಿಜಯನಗರ(ಹೊಸಪೇಟೆ) 27: ಕಲ್ಯಾಣ ಕರ್ನಾಟಕ ವಿಭಾಗದ ಏಕೈಕ ಸಫಾರಿ ಹೊಂದಿರುವ ಕಮಲಾಪುರದ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ಗೆ ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನದಿಂದ ‘ರೇವಾ’ ಎಂಬ ಗಂಡು ಹುಲಿ ನವ ಅತಿಥಿಯಾಗಿ ಗುರುವಾರ ಆಗಮಿಸಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ. ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣಿಗಳನ್ನು ಪ್ರವಾಸಿಗರಿಗೆ ವೀಕ್ಷಿಸಲು ಅನುವು ಮಾಡಿಕೊಡಲು ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನದಿಂದ ಒಂದು ಗಂಡು ಹುಲಿ ಮತ್ತು ಒಂದು ಗಂಡು ನೀರು ಕುದುರೆಯನ್ನು ಹಸ್ತಾಂತರಿಸಿಕೊಳ್ಳಲು ಕೇಂದ್ರ ಮೃಗಾಲಯ ಪ್ರಾಧಿಕಾರ ನವದೆಹಲಿ ಅನುಮತಿ ನೀಡಿದೆ. ಗುರುವಾರದಂದು ರೇವಾ ಎಂಬ ಹೆಸರಿನ ಗಂಡು ಹುಲಿ ಅತಿಥಿಯಾಗಿ ಆಗಮಿಸಿದೆ. ಮುಂದಿನ ದಿನಗಳಲ್ಲಿ ನೀರು ಕುದರೆ ಆಗಮಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 