70ರ ಕಾಲಘಟ್ಟದ ಪ್ರೇಮ ಕಥಾನಕ ‘ಸರಳ ಸುಬ್ಬರಾವ್’
'Sarala Subbarao', a love story set in the 70s
ಫೆ. 20ರಂದು ತೆರೆಗೆ ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ ಮತ್ತು 1970ರ ಕಾಲಘಟ್ಟದ ಪ್ರೇಮ ಕಥಾನಕ ಹೊಂದಿರುವ ‘ಸರಳ ಸುಬ್ಬರಾವ್’ ಚಿತ್ರದ ಟ್ರೇಲರ್ ಕಳೆದವಾರ ರೀಲೀಸ್ ಆಗಿ ಜಾಲತಾಣದಲ್ಲಿ ಪ್ರಶಂಸೆ ಪಡೆದಿದೆ.
ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈವಾರ ಪ್ರೇಮಿಗಳ ದಿನದ ಪ್ರಯುಕ್ತ ಸಿನಿಮಾ ಬಿಡುಗಡೆ ಆಗಬೇಕಿತ್ತು. ಕಾರಣಾಂತರದಿಂದ ಮುಂದಕ್ಕೆ ಹೋಗಿರುವ ‘ಸರಳ ಸುಬ್ಬರಾವ್’ ಮುಂದಿನವಾರ (ಫೆ. 20) ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಸಿನಿಮಾ ಬಗ್ಗೆ ನಿರ್ದೇಶಕ ಮಂಜು ಸ್ವರಾಜ್ ಮಾತನಾಡಿ, ‘ಸರಳ ಸುಬ್ಬರಾವ್’ 1970ರ ಕಾಲಘಟ್ಟದ ಪ್ರೇಮಕಥೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ತ್ರಿವೇಣಿ ಅವರ ಕಾದಂಬರಿ ಆಧರಿಸಿದ ಕಥೆ ಇದು. ಈವರೆಗೂ ಕನ್ನಡದಲ್ಲಿ ತ್ರಿವೇಣಿ ಅವರ ಕಾದಂಬರಿಗಳನ್ನು ಆಧರಿಸಿ ಬಂದಿರುವ ಚಿತ್ರಗಳೆಲ್ಲಾ ಗೆದ್ದಿವೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಕೂಡ. ನಮ್ಮ ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗುವ ಭರವಸೆ ಇದೆ. ಹೆಚ್ಚು ಕಡಿಮೆ ನೂರು ವರ್ಷಗಳ ಇತಿಹಾಸವಿರುವ ಮೈಸೂರಿನ ಮನೆಯೊಂದರಲ್ಲಿ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ನಮ್ಮ ಚಿತ್ರ ನೋಡುಗರ ಮನ ಗೆದ್ದಿದೆ. ಅಜೇಯ್ ರಾವ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಪಂಜಾಬಿನ ಮಿಶಾ ನಾರಂಗ್. ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಅಂತರಾಷ್ಟ್ರೀಯ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಹಾಗೂ ಬಸವರಾಜ್ ಅರಸ್ ಸಂಕಲನ ‘ಸರಳ ಸುಬ್ಬರಾವ್’ ಚಿತ್ರಕ್ಕಿದೆ’ ಎಂದು ತಿಳಿಸಿದರು.
ನಾನು ಹುಟ್ಟಿದ್ದು 1980ರಲ್ಲಿ. ಈ ಚಿತ್ರದ ಕಥೆ ನಡೆಯುವುದು 1970ರ ಕಾಲಘಟ್ಟದಲ್ಲಿ ಎಂದು ಮಾತನಾಡಿದ ನಾಯಕ ಅಜೇಯ್ ರಾವ್, ‘ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥೆಯನ್ನು ನಿರ್ದೇಶಕ ಮಂಜು ಸ್ವರಾಜ್ ಹಾಗೂ ನಿರ್ಮಾಪಕ ಲೋಹಿತ್ ಆಯ್ಕೆ ಮಾಡಿಕೊಂಡಿದ್ದಾರೆ. ರೆಟ್ರೊ ಶೈಲಿಯಲ್ಲಿ ಕಾಣಿಸಿಕೊಂಡಿರುವಿದಕ್ಕೆ ಖುಷಿಯಿದೆ. ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಎಲ್ಲರೂ ಚಿತ್ರಮಂದಿರಗಳಲ್ಲಿ ಕುಟುಂಬ ಸಮೇತ ನಮ್ಮ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ’ ಎಂದರು.
‘ಈ ಚಿತ್ರದಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ’ ಎಂದರು ನಾಯಕಿ ಮಿಶಾ ನಾರಂಗ್.‘ನಿರ್ದೇಶಕರು ಹೇಳಿದ ಈ ಕಥೆ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಅಜೇಯ್ ರಾವ್ ಸೇರಿದಂತೆ ಚಿತ್ರತಂಡದ ಎಲ್ಲರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಫೆಬ್ರವರಿ 20 ರಂದು ನಮ್ಮ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ’ ಎಂದು ನಿರ್ಮಾಪಕ ಲೋಹಿತ್ ನಂಜುಂಡಯ್ಯ ಹೇಳಿದರು.
ಚಿತ್ರದಲ್ಲಿ ನಟಿಸಿರುವ ರಘು ರಾಮನಕೊಪ್ಪ, ವೀಣಾ ಸುಂದರ್, ಚಿತ್ಕಲಾ ಬಿರಾದಾರ್ ಮುಂತಾದ ಚಿತ್ರತಂಡದ ಸದಸ್ಯರು ‘ಸರಳ ಸುಬ್ಬರಾವ್’ ಚಿತ್ರದ ಕುರಿತು ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 