ತ್ರಿವೇಣಿ ಅವರ ಕಾದಂಬರಿ ಆಧರಿಸಿದ ಚಿತ್ರ 'ಸರಳ ಸುಬ್ಬರಾವ್'
'Sarala Subbarao' is a film based on Triveni's novel.
ಫೆ. 20ರಂದು ತೆರೆಗೆ
1970ರ ಕಾಲಘಟ್ಟದ ಪ್ರೇಮ ಕಥಾನಕ ಹೊಂದಿರುವ 'ಸರಳ ಸುಬ್ಬರಾವ್' ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಚಿತ್ರ ಕಳೆದ ವಾರವೇ ರೀಲೀಸ್ ಆಗಬೇಕಿತ್ತು. ಆದರೆ ಕಾರಣಾಂತರದಿಂದ ಮುಂದಕ್ಕೆ ಹೋಗಿ ಈಗ ಇದೇ ಫೆಬ್ರವರಿ 20ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ ಈ ಚಿತ್ರವನ್ನು ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನ ಮಾಡಿದ್ದಾರೆ. ಚಿತ್ರದ ನಾಯಕನಾಗಿ ಅಜೇಯ್ ರಾವ್, ನಾಯಕಿಯಾಗಿ ಮಿಶಾ ನಾರಂಗ್ ನಟಿಸಿದ್ದಾರೆ.
ಈಗಾಗಲೇ ಟ್ರೇಲರ್, ಹಾಡಿನ ಮೂಲಕ ಪ್ರೇಕ್ಷಕರನ್ನು ಥಿಯೇಟರ್‌ಗೆ ಬರುವಂತೆ 'ಸರಳ ಸುಬ್ಬರಾವ್' ಕುತೂಹಲವನ್ನು ಹುಟ್ಟು ಹಾಕಿದೆ. ಅದಂಗೆ ಈ ಚಿತ್ರ ತ್ರಿವೇಣಿ ಅವರ ಕಾದಂಬರಿ ಆಧರಿಸಿದ ಕಥೆಯನ್ನು ಒಳಗೊಂಡಿದೆ. ಈವರೆಗೂ ಕನ್ನಡದಲ್ಲಿ ತ್ರಿವೇಣಿ ಅವರ ಕಾದಂಬರಿಗಳನ್ನು ಆಧರಿಸಿ ಬಂದಿರುವ ಚಿತ್ರಗಳೆಲ್ಲಾ ಗೆದ್ದಿವೆ. ಹಾಗಾಗಿ ಈ ಚಿತ್ರದ ಮೇಲೂ ನೀರೀಕ್ಷೆ ಹೆಚ್ಚಾಗಿದೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಕೂಡ ಸರಳ ಸುಬ್ಬರಾವ್‌ನಲ್ಲಿದೆ. 'ನಮ್ಮ ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗುವ ಭರವಸೆ ಇದ್ದು, ಹೆಚ್ಚು ಕಡಿಮೆ ನೂರು ವರ್ಷಗಳ ಇತಿಹಾಸವಿರುವ ಮೈಸೂರಿನ ಮನೆಯೊಂದರಲ್ಲಿ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ನಮ್ಮ ಚಿತ್ರ ನೋಡುಗರ ಮನ ಗೆದ್ದಿದೆ. ಅಜೇಯ್ ರಾವ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಪಂಜಾಬಿನ ಮಿಶಾ ನಾರಂಗ್. ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಅಂತರಾಷ್ಟ್ರೀಯ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಹಾಗೂ ಬಸವರಾಜ್ ಅರಸ್ ಸಂಕಲನ 'ಸರಳ ಸುಬ್ಬರಾವ್' ಚಿತ್ರಕ್ಕಿದೆ' ಎಂದು ನಿರ್ದೇಶಕ ಮಂಜು ಸ್ವರಾಜ್ ಚಿತ್ರದ ಬಗ್ಗೆ ತಿಳಿಸಿದ್ದಾರೆ.
ಇನ್ನು ನಿರ್ಮಾಪಕ ಲೋಹಿತ್ ನಂಜುಂಡಯ್ಯ, 'ನಿರ್ದೇಶಕರು ಹೇಳಿದ ಈ ಕಥೆ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಅಜೇಯ್ ರಾವ್ ಸೇರಿದಂತೆ ಚಿತ್ರತಂಡದ ಎಲ್ಲರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಫೆಬ್ರವರಿ 20 ರಂದು ನಮ್ಮ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ' ಎಂದು ಹೇಳಿದ್ದಾರೆ. ಚಿತ್ರದಲ್ಲಿ ನಟಿಸಿರುವ ರಘು ರಾಮನಕೊಪ್ಪ, ವೀಣಾ ಸುಂದರ್, ಚಿತ್ಕಲಾ ಬಿರಾದಾರ್ ಮುಂತಾದ ಚಿತ್ರತಂಡದ ಸದಸ್ಯರು 'ಸರಳ ಸುಬ್ಬರಾವ್' ಚಿತ್ರದ ಕುರಿತು ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 