‘ಆರ್ಎಸ್ಎಸ್ ವಿರುದ್ಧ ಲಘು ಹೇಳಿಕೆ ನೀಡುವುದನ್ನು ಬಿಡಲಿ’
'Stop making light statements against RSS'
ಲೋಕದರ್ಶನ ವರದಿ
ಸಿಂದಗಿ 18: ಆರ್ಎಸ್ಎಸ್ ದೇಶದ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯನ್ನು ಎತ್ತಿಹಿಡಿಯುವ ಶಿಸ್ತಿನ ದೇಶಭಕ್ತ ಸಂಘಟನೆ. ಇಂತಹ ಸಂಘಟನೆಯ ವಿರುದ್ಧ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಸತತವಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಸಿಂದಗಿ ಮತಕ್ಷೇತ್ರದ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರೇ ದೇಶಪ್ರೇಮ ಬಿತ್ತುತ್ತಿರುವ ಸಂಘಟನೆಯನ್ನು ಟೀಕಿಸುವ ಮೊದಲು, ತಮ್ಮ ಇಲಾಖೆಯ ಪ್ರಗತಿ ಪರೀಶೀಲನೆ ನಡೆಸಲಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಚಿವರು ದಿನಬೆಳಗಾದರೆ ಆರ್ಎಸ್ಎಸ್ ಜಪ ಮಾಡುತ್ತಿದ್ದಾರೆ.
ಖರ್ಗೆ ಅವರು ಸಚಿವರ ಇಂತಹ ಸಮಾಜ ಒಡೆಯುವ ಹೇಳಿಕೆಗಳನ್ನು ಸಿಂದಗಿ ಕ್ಷೇತ್ರದ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧೈರ್ಯವಿದ್ದರೆ ತಮ್ಮ ಸರ್ಕಾರದ ಸಾಧನೆಗಳ ಮೇಲೆ ರಾಜಕಾರಣ ಮಾಡಲಿ. ಅದನ್ನು ಬಿಟ್ಟು ಆರ್ಎಸ್ಎಸ್ ಸಂಘಟನೆಯನ್ನು ಗುರಿಯಾಗಿಸಿಕೊಂಡು ಹೈಕಮಾಂಡ್ ಮನವೊಲಿಸುವ ರಾಜಕಾರಣ ಮಾಡುವುದನ್ನು ಬಿಡಿ. ಆರ್ಎಸ್ಎಸ್ ಯಾವುದೇ ನೋಂದಣಿ ಇಲ್ಲದ ಸಂಸ್ಥೆ ಎಂದು ಸಚಿವರು ಪತ್ರ ಬರೆಯುತ್ತಿರುವುದು ಅವರ ಅಜ್ಞಾನವನ್ನು ತೋರಿಸುತ್ತದೆ. ಸಂಘಟನೆಯು ದೇಶದ ವಿಪತ್ತುಗಳ ಸಮಯದಲ್ಲಿ ಯಾವುದೇ ಪಲಾಫೇಕ್ಷವಿಲ್ಲದೇ ಅಪಾಯದ ಅಂಚಿನಲ್ಲಿರುವ ಜನರಿಗೆ ನೆರವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಇಂತಹ ಲಘು ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಅಭಿವೃದ್ಧಿಯೆಡೆಗೆ ಗಮನ ಹರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 