ಗದಗ 21: ವಿದ್ಯಾಥರ್ಿಗಳು ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು. ವಿದ್ಯಾರ್ಥಿಗಳು ಸಾಧನೆ ಮಾಡುವ ಛಲವನ್ನು ಅಳವಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ ಎಂದು ಬನಹಟ್ಟಿಯ ಕನರ್ಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾದ್ಯಯ ಆರ್.ಜಿ. ಜುನ್ನಪ್ಪನವರ ತಿಳಿಸಿದರು.
ಗದಗ ಜೆಲ್ಲೆಯ ನರಗುಂದ ತಾಲೂಕಿನ ಬನಹಟ್ಟಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರ ದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ಕೊಣ್ಣೂರ ಬೀದಿ ನಾಟಕ ಮತ್ತು ಗಾನ ತರಂಗ ಸಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ತಂಡಗಳಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿ ಗ್ರಾಮದ ಸ್ವಚ್ಚತೆ ಹಾಗೂ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು. ಸಹ ಶಿಕ್ಷಕ ಎಸ್.ಎಸ್. ಹಿರೇಮಠ, ಎಚ್.ಎಸ್. ತಳವಾರ, ಎಮ್.ವಿ. ದೇಮ್ಮಶೆಟ್ಟರ್, ಎಸ್.ಎಸ್. ಬೀರಾದರ, ಯು.ಸಿ. ಗಟ್ಟುನೂರ, ಎನ್.ಆರ್. ನಿಡಗುಂದಿ, ವಿ.ಬಿ. ಮೇಟಿ, ವಾರ್ತಾ ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾಥರ್ಿಗಳು ಶಾಲಾ ಸಿಬ್ಬಂದಿಗಳು ಹಾಜರಿದ್ದರು.