'ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಯಶಸ್ವಿಗೊಳಿಸಿ'

ಕೊಪ್ಪಳ:  ಜಿಲ್ಲೆಯಲ್ಲಿ ನವೆಂಬರ್. 25  ರಿಂದ ಡಿಸೆಂಬರ್. 10 ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಎಂ. ಪಿ. ಮಾರುತಿ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿವಾರಣ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಯ ಸಹಕಾರ ಅಗತ್ಯವಾಗಿರುತ್ತದೆ. ವಾತರ್ಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಾರ್ಯಕ್ರಮದ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಬೇಕು. ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಮೂಲಕ ಡಂಗೂರ ಹಾಕಿಸಬೇಕು. ನಗರದಲ್ಲಿ ನಗರಸಭೆ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಘೋಷಣೆ ಕೂಗುವುದು ಹಾಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಮೀಕ್ಷೆ ಮಾಡಲು ಅಂಗನವಾಡಿ ಕಾರ್ಯಕತರ್ೆಯರು ಅಥವಾ ಸ್ವಯಂ ಸೇವಕರನ್ನು ನಿಯೋಜಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಹೆಚ್ಚು ಮುತುವರ್ಜಿ  ವಹಿಸಿ ಚಿಕಿತ್ಸೆ ಬಗ್ಗೆ ಮೇಲ್ವಿಚಾರಣೆ ಮಾಡಬೇಕು. ಆರೋಗ್ಯ ಇಲಾಖೆಯ ಆಶಾ ಕಾರ್ಯಕತರ್ೆಯರು, ಆರೋಗ್ಯ ಸಹಾಯಕರು, ಮೇಲ್ವಿಚಾರಕರು, ಆರೋಗ್ಯ ಶಿಕ್ಷಣಾಧಿಕಾರಿಗಳು ಈ ಕಾರ್ಯಕ್ರಮದ ಮೇಲ್ವಿಚಾರಣೆ ಮಾಡಬೇಕು ಎಂದು ಅವರು ಸೂಚಿಸಿದರು. 

ಜಿಲ್ಲಾ ಕುಷ್ಠರೋಗ ನಿಮರ್ೂಲನಾಧಿಕಾರಿ ಡಾ. ಎಸ್. ಕೆ. ದೇಸಾಯಿ ಮಾತನಾಡಿ, ಜಿಲ್ಲೆಯಲ್ಲಿರುವ ಕುಷ್ಠರೋಗದ ಸ್ಥಿತಿ-ಗತಿ, ಕುಷ್ಠರೊಗ ಹಾಗೂ ಅದರ ಲಕ್ಷಣಗಳು, ಕಾರಣವಾಗುವ ಬ್ಯಾಕ್ಟಿರಿಯಾ, ರೋಗವನ್ನು ಪತ್ತೆ ಹಚ್ಚುವ ರೀತಿ ಕುರಿತು ಮಾಹಿತಿ ನೀಡಿದರು. ಚರ್ಮದ ಯಾವುದೇ ಖಾಯಿಲೆ ಇದ್ದರೂ ಯಾವುದೇ ಮುಜುಗರ ಪಡದೇ, ನಮ್ಮ ಇಲಾಖೆಯ ಆರೋಗ್ಯ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತೆಯರು, ನಿಮ್ಮ ಮನೆಗೆ ಬಂದಾಗ ಸಹಕರಿಸಿ, ಪರೀಕ್ಷಿಸಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕುಷ್ಠರೋಗ ನಿಮರ್ೂಲನಾಧಿಕಾರಿಗಳ ಕಾಯರ್ಾಲಯ, ದೂ. ಸಂ: 08539-220857 ಹಾಗೂ ಉಚಿತ ಆರೋಗ್ಯ ಸಹಾಯವಾಣಿ 104ಗೆ ಕರೆಮಾಡಬಹುದು ಎಂದು ಹೇಳಿದರು.

ಸಭೆಯಲ್ಲಿ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಅಪರ ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ, ಜಿಲ್ಲಾ ಆರ್. ಸಿ. ಹೆಚ್ ಅಧಿಕಾರಿ ಡಾ. ಜಂಬಯ್ಯ ಬಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ ಎಂ.ಜಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಸವರಾಜ ಕುಂಬಾರ, ಹಾಗೂ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.