‘ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಅಭಿಮಾನ ಮೂಡುತ್ತದೆ’
'Target award programs instill pride in students for their country'
ಬೆಳಗಾವಿ 26: ಪ್ರತಿಭಾವಾಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿರುವದು ಶ್ಲಾಘನೀಯವಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸಮಾಜದ ಬಗ್ಗೆ ದೇಶದ ಬಗ್ಗೆ ಅಭಿಮಾನ ಮೂಡುತ್ತದೆ. ನಮ್ಮ ಪೊಲೀಸ್ಠಾಣೆ ಹಾಗೂ ಸಿಬ್ಬಂದಿ ಹಗಲಿರುಳು ತಮ್ಮ ಸೇವೆಗಾಗಿ ಬದ್ಧರೀದ್ದೇವೆ ತಮ್ಮ ಯಾವುದೇ ತೊಂದರೆಗೆ ನಮ್ಮನ್ನು ಸಂಪರ್ಕಿಸಿ. ನಮ್ಮೊಂದಿಗೆ ಜನಸ್ನೇಹಿ ಪೊಲೀಸ್ರಾಗಿ ಹಗಲಿರುಳು ತಮ್ಮ ರಕ್ಷಣೆಗಾಗಿ ನಮ್ಮ ಸೇವೆ ಇರುತ್ತದೆ ಎಂದು ಮಾರಿಹಾಳ ಠಾಣೆಯ ಪೊಲೀಸ್ ನೀರೀಕ್ಷಕ ಆಯ್ ಆರ್ ಪಟ್ಟಣಶೆಟ್ಟಿ ಹೇಳಿದರು.
ಅವರು ತಾಲೂಕಿನ ಪಂಥ ನಗರದ ಶಿವಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಪಂಥ ನಗರ ರಹವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪನಾ ದಿನಾಚರಣೆಯನ್ನುಯ ಮುಖ್ಯ ಅತಿಥಿಗಳಾಗಿ ಮಾತನಾಡಿ ಸಮಾಜದಲ್ಲಿ ಪ್ರತಿಯೊಂದು ಹಂತದ ಅಭಿವೃದ್ಧಿ ಕಾರ್ಯಕ್ಕೆ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯ ಹೇಳಿದರು.
ಅಧ್ಯಕ್ಷತೆಯನ್ನು ನಿವೃತ್ತ ಆಪರ ಜಿಲ್ಲಾಧಿಕಾರಿ ಹಾಗೂ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮಪ್ಪ ಹಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರಾನಂದ ಮದಿಹಳ್ಳಿ ಎಸ್ ಬಿ ದೇಯನ್ನವರ ಓಂ ಶಾಂತಿ ಆಶ್ರಮದ ಸಹೋದರ ಬಿ ಕೆ ನಾಗಪ್ಪರವರು, ಎ ಬಿ ನಾಯಕ. ಸೋಮಪ್ಪ ವ್ಯಾಪಾರಗಗಿ ಮತಿ ಲಲಿತಾ ಭಟ್. ಅತಿಥಿಗಳಾಗಿ ಬಸವರಾಜ ವಕುಂದ ಸುಬೇದಾರ ಹಾಗೂ ಪಂಥ ನಗರ ರಹವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 