'ಶುದ್ಧ ಮತದಾರರ ಪಟ್ಟಿ ತಯಾರಿಕೆ ಚುನಾವಣಾ ಆಯೋಗದ ಉದ್ದೇಶ'
'The Election Commission's objective is to prepare a clean voter list'
-ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ
ಹಾವೇರಿ 30: ಮತದಾರರ ಪಟ್ಟಿಗೆ 18 ವರ್ಷ ಮೇಲ್ಪಟ್ಟವರ ಹೆಸರು ಸೇರೆ್ಡ ಹಾಗೂ ಅನರ್ಹರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೂಲಕ ದೋಷರಹಿತ ಶುದ್ಧ ಮತದಾರರಪಟ್ಟಿ ತಯಾರಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ವಿಶೇಷ ಸಮಗ್ರ ಪರಿಷ್ಕರಣೆ ಸಿದ್ಧತೆ ಮತ್ತು ಸ್ವೀಪ್/ಇಎಲ್‌ಸಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣಾ ಆಯೋಗ ಒಂದು ಸಮುದಾಯ ಅಥವಾ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಲ್ಲ, ಮತದಾರರ ಪಟ್ಟಿ ತಯಾರಿಕೆ ಸೇರಿದಂತೆ ತನ್ನ ಕಾರ್ಯವನ್ನು ಅತ್ಯಂತ ಪಾರದರ್ಶಕವಾಗಿ ಹಾಗೂ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುತ್ತದೆ ಎಂದರು.
ನಿರಂತರ ಚಟುವಟಿಕೆ: ಸ್ವೀಪ್‌ನಿಂದ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರೆ್ಡ, ಬದಲಾವಣೆ, ತಿದ್ದುಪಡಿ, ವೋಟರ್ ಹೈಲ್ಪಲೈನ್, ಸಹಾಯವಾಣಿ 1950 ಕುರಿತು ಸಾರ್ವಜನಿಕರಿಗೆ ನಿರಂತರ ಜಾಗೃತಿ ಮೂಡಿಸಬೇಕು. ಹೊಸದಾಗಿ ಮತದಾರ ಪಟ್ಟಿಗೆ ಸೇರೆ್ಡಗೆ ನಮೂನೆ -6ರಲ್ಲಿ ಭರ್ತಿಮಾಡಬೇಕು. ಈ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು. ಒಂದು ಬಾರಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ, ತಿದ್ದುಪಡಿ ಹಾಗೂ ಬದಲಾವಣೆಗೆ ಬೇರೆ ಬೇರೆ ನಮೂನೆಗಳನ್ನು ಭರ್ತಿಮಾಡಬೇಕು. ಈ ಕುರಿತು ಸ್ಪಷ್ಟಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಾಗೃತಿ ಮೂಡಿಸಿ: ಶಾಲಾ-ಕಾಲೇಜುಗಳಲ್ಲಿ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಬೇಕು. 17 ವರ್ಷ ವಯೋಮಾನದ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶವಿದೆ. ಅವರಿಗೆ 18 ವರ್ಷ ಪೂರೈಸಿದ ನಂತರ ಅವರ ಮನೆ ಬಾಗಿಲಿಗೆ ಅಂಚೆ ಇಲಾಖೆಯಿಂದ ರಜಿಸ್ಟರ್ ಪೋಸ್ಟ್‌ನಲ್ಲಿ ಮತದಾರರ ಚೀಟಿ ಬರುತ್ತದೆ. ಹಾಗಾಗಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಹೆಸರನ್ನು ಮತದಾರರ ಪಟ್ಟಿಗೆ ಸೇರೆ್ಡಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಮತದಾರರ ಪಟ್ಟಿಗೆ ಹೆಸರು ಸೇರೆ್ಡ ಕುರಿತು ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯತ್ ಕಚೇರಿ, ವಿವಿಧ ಸಂಘ-ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿರಿ. ಬಿಎಲ್‌ಒಗಳು ಮನೆ ಮನೆಗೆ ಭೇಟಿ ಮಾಡುವ ಮೂಲಕ ಮತದಾರ ಪಟ್ಟಿ ನೋಂದಣಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.
ವಿವಿಧ ಸ್ಪರ್ಧೆ:ರಾಷ್ಟ್ರೀಯ ಮತದಾರರ ದಿನ ಅಂಗವಾಗಿ ಚರ್ಚಾ, ನಾಟಕ, ಪ್ರಬಂಧ, ಪೋಸ್ಟರ್ ಮೇಕರ್ ಸ್ಪರ್ಧೆ ಸೇರಿದಂತೆ ವಿವಿಧ ಚಟವಟಿಕೆಗಳನ್ನು ಆಯೋಜಿಸುವ ಮೂಲಕ ಎಲ್ಲರಿಗೂ ಅರಿವು ಮೂಡಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಯೋಜಿಸಬೇಕು. ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಬೇಕು ಹಾಗೂ ಸ್ವೀಪ್ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ರಾಜ್ಯ ಎಸ್.ಎಲ್.ಎಂ.ಟಿ.ನೋಡಲ್ ಅಧಿಕಾರಿ ಶಬ್ಬೀರ ಮುನಿಯಾರ ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸುವ ಸ್ವೀಪ್ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.ಶಾಲಾ-ಕಾಲೇಜುಗಲ್ಲಿ ಶಾಲಾ ಸಂಸತ್ ಹಾಗೂ ಚುನಾವಣಾ ಚಟುವಟಿಕೆಗಳನ್ನು ಮಾಡಲಾಗಿದೆ, ಆದರೆ ಆನ್‌ಲೈನ್ ನೊಂದಣಿಯಾಗಿಲ್ಲ. 310 ಕಾರ್ಯಕ್ರಮಗಳ ನೋಂದಣಿಯಾಗಿದೆ, ಆದರೆ 60 ಚಟುವಟಿಕೆಗಳನ್ನು ಮಾತ್ರ ಅಪ್‌ಲೋಡ್ ಮಾಡಲಾಗಿದೆ. ಎಲ್ಲರೂ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಪುನಿತ್, ಪದವಿ ಪೂರ್ವ ಶಿಕ್ಷಣ ಇಲಾಖಾ ಉಪನಿರ್ದೇಶಕ ಅಶೋಕ ಶಾಸ್ತ್ರೀ, ಶಾಲಾ ಶಿಕ್ಷಣ ಇಲಾಖೆ ಉಪನಿದೇಶಕ ದಂಡಿನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಚುನಾವಣಾ ತಹಶೀಲ್ದಾರ ಅಮೃತಗೌಡ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 