‘ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ವೈದ್ಯರ ಸೇವೆ ಅನನ್ಯ’
'The service of doctors is unique in building a healthy society'
ಮುದ್ದೇಬಿಹಾಳ 03: ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ವೈದ್ಯರ ಸೇವೆ ಅನನ್ಯವಾಗಿದೆ ಮತ್ತು ಪ್ರಾಣ ನೀಡುವವ ದೇವರಾದರೆ ಅದನ್ನು ರಕ್ಷಿಸುವನು ವೈದ್ಯನಾಗಿದ್ದಾನೆ. ತಮ್ಮ ಪ್ರಾಣವನ್ನು ಲೆಕ್ಕಿಸದೇ ರೋಗಿಗಳ ಸೇವೆಗೈಯ್ಯುವ ವೈದ್ಯರ ಸೇವೆ ನಿಜವಾಗಿಯೂ ಶ್ಲಾಘನೀಯವಾದದು ಎಂದು ಮಾಜಿ ಶಾಸಕ ಎ ಎಸ್ ಪಾಟೀಲ(ನಡಹಳ್ಳಿ) ಹೇಳಿದರು.
ಪಟ್ಟಣದ ಹೊರವಲಯದಲ್ಲಿರುವ ಅವರ ಫಾರಮ್ ಹೌಸ್ ನಲ್ಲಿ ಬಿಜೆಪಿ ಮಂಡಲದಿಂದ ಆಯೋಜಿಸಿದ್ದ ವೈದ್ಯರ ಹಾಗೂ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಸೇವೆಯ ಜತೆಗೆ ಪ್ರಾಮಾಣಿಕತೆಯು ಮುಖ್ಯವಾಗಿರುತ್ತದೆ. ಪತ್ರಕರ್ತರು ಸಹ ತಮ್ಮ ಜೀವನವನ್ನು ಸಮಾಜ ಸೇವೆಗೆ ಮುಡುಪಾಗಿಟ್ಟಿದ್ದಾರೆ. ಅವರಂತೆಯೇ ಇಂದಿನ ಯುವಕರು ಒಳ್ಳೆಯ ಶಿಕ್ಷಣದೊಂದಿಗೆ ಸಾಧನೆ ಮಾಡುವ ಮೂಲಕ ಸಂಸ್ಥೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ನಂತರ ವೈದ್ಯರಿಗೆ ಹಾಗೂ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು. ಇಂದಿನ ಯುವ ವೈದ್ಯರು ಕೂಡ ಆರ್. ಆರ್. ಪದಕಿಯವರ ಸೇವಾ ಮನೋಭಾವದಿಂದ ಪ್ರೇರಿತರಾಗಿ ಸಮಾಜ ಸೇವೆಯಲ್ಲಿ ತೊಡಗಬೇಕು ಎಂದರು.
ತಾಲೂಕು ವೈದ್ಯಾಧಿಕಾರಿ ಡಾ. ಸತೀಶ್ ತಿವಾರಿ, ಆಡಳಿತ ವೈದ್ಯಾಧಿಕಾರಿ ಡಾ. ಅನಿಲ್ ಶೇಗುಣಸಿ, ಪಟ್ಟಣದ ವಿವಿಧ ವೈದ್ಯರು, ದಂಪತಿಗಳು, ಹಾಗೂ ನಾನಾ ಗ್ರಾಮೀಣ ಪ್ರದೇಶಗಳ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. ಡಾ. ರಾಜೇಶ್ವರಿ ಗೂಳಿ ಪ್ರಾರ್ಥಿಸಿದರು. ವೈದ್ಯ ಡಾ. ಸಿ.ಕೆ. ಶಿವಯೋಗಿಮಠ ಸ್ವಾಗತಿಸಿದರು, ಡಾ. ರೇವಣಸಿದ್ದಪ್ಪ ಮಸೂತಿ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಎಂ.ಎಸ್. ಪಾಟೀಲ್, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಡಾ. ವಿರೇಶ ಪಾಟೀಲ್, ಹಾಗೂ ಇತರ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 