ನಟ ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ'ಥಗ್ ಲೈಫ್ ' ರಿಲೀಸ್ ಗೆ ಅವಕಾಶ ಕೊಡಲ್ಲ
'Thug Life' won't be allowed to release unless actor Kamal Haasan apologizes
ಬೆಂಗಳೂರು 29: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ತಮಿಳು ನಟ ಕಮಲ್ ಹಾಸನ್ ಮೇ 30 ರೊಳಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರ ಮುಂದಿನ 'ಥಗ್ ಲೈಫ್' ಚಿತ್ರ ರಿಲೀಸ್ ಗೆ ಅವಕಾಶ ನೀಡದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ.
ಈ
ಹಿನ್ನೆಲೆಯಲ್ಲಿ ಕರ್ನಾಟಕ ಸಿನಿಮಾ ವಿತರಕ ಕಮಲಾಕರ್ ಅವರ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಥಾಮಸ್ ಡಿಸೋಜಾ, ^-=ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು.
ಸಭೆಯಲ್ಲಿ
ಮಾತನಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾ ಸಿನಿಮಾ ಬ್ಯಾನ್ ಮಾಡ್ಬೇಕು ಎಂದು ಹಲವು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಈ ವಿಚಾರದ ಬಗ್ಗೆ
ಚರ್ಚಿಸಿದ್ದು, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇವೆ. ಅವರು ಹೇಳಿರುವುದರಲ್ಲಿ ತಪ್ಪಿದ್ದು, ಕಮಲ್ ಹಾಸನ್ ರ ತಪ್ಪನ್ನ ಮನವರಿಕೆ
ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ನಿರ್ಮಾಪಕ
ಸಾರಾ ಗೋವಿಂದು, ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇವತ್ತು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಖಂಡಿಸುತ್ತೇವೆ. ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ ಎಂದು ಎಚ್ಚರಿಕೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 