ಕೆಎಂ ಸೈಯದ್‌ಗೆ ಉದ್ಯೋಗ ರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
'Udyoga Ratna' National Award conferred upon KM Syed
ಕೊಪ್ಪಳ ಜು. 29: ಸುವೇರ್ ಕಲ್ಚರಲ್ ಅಕಾಡೆಮಿ, ಬೆಂಗಳೂರಿನಿಂದ ಇತ್ತೀಚೆಗೆ ಪ್ರದಾನಗೊಂಡ ’ಉದ್ಯೋಗ ರತ್ನ’ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಮಾಜಸೇವಕ ಹಾಗೂ ಉದ್ಯಮಿ ಕೆ.ಎಂ. ಸೈಯದ್ ಅವರನ್ನು ಕೊಪ್ಪಳದಲ್ಲಿರುವ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಿವಾರ್ಯ ಕಾರಣಗಳಿಂದ ಕೆ.ಎಂ. ಸೈಯದ್ ಅವರು ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸಂಘಟಕ, ಸಾಹಿತಿ, ಹಿರಿಯ ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ರಮೇಶ್ ಸುವೇರ್ ಅವರು ಕೊಪ್ಪಳಕ್ಕೆ ಭೇಟಿ ನೀಡಿ, ಸೈಯದ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
ಕೆ.ಎಂ. ಸೈಯದ್ ಅವರು ಹಲವು ವರ್ಷಗಳಿಂದ ಸಮಾಜಸೇವೆ, ಉದ್ಯಮ ಮತ್ತು ಉದ್ಯೋಗ ಸೃಷ್ಟಿ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕೊಪ್ಪಳದಲ್ಲಿ ಹೋಟೆಲ್ ಉದ್ಯಮ ನಡೆಸುವುದರ ಜೊತೆಗೆ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಸಹಕಾರಿ ಬ್ಯಾಂಕ್ ಆರಂಭಿಸಿ, ಅನೇಕ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವುದು ಅವರ ಸೇವೆಯ ಪ್ರಮುಖ ಸಾಧನೆಯಾಗಿದೆ. ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಅವರಿಗೆ ’ಉದ್ಯೋಗ ರತ್ನ’ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ರಮೇಶ್ ಸುವೇರ್ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಎಂ. ಸಾಧಿಕ್ ಅಲಿ, ಕೆ.ಎಂ. ಸೈಯದ್ ಅವರ ಪುತ್ರ ಮೊಹಮ್ಮದ್ ಕೈಫ್ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು. ಕೆ.ಎಂ. ಸೈಯದ್ ಅವರಿಗೆ ’ಉದ್ಯೋಗ ರತ್ನ’ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳು, ಗಣ್ಯರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 