ಧಾರವಾಡದಲ್ಲಿ ’ವಿದ್ಯಾರಶ್ಮಿ’ ಪ್ರಶಸ್ತಿ ಪ್ರದಾನ ಸಮಾರಂಭ
'Vidyarashmi' award ceremony in Dharwad
ಲೋಕದರ್ಶನ ವರದಿ
ಧಾರವಾಡ 29: ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ, ಉತ್ತಮ ಹೃದಯ, ಸಂಸ್ಕಾರ ಮತ್ತು ಮೌಲ್ಯಗಳನ್ನು ಹೊಂದಿದ ಸತ್ಪ್ರಜೆಗಳನ್ನಾಗಿ ರೂಪಿಸುವುದು ಅತ್ಯಗತ್ಯ ಎಂದು ರಾಯಚೂರು ಆಕಾಶವಾಣಿಯ ನಿವೃತ್ತ ಅಧಿಕಾರಿ ಬಿ.ಎಂ. ಶರಭೇಂದ್ರಸ್ವಾಮಿ ಹೇಳಿದರು. ನಗರದಲ್ಲಿ ಕ.ವಿ.ವ. ಸಂಘ ಹಾಗೂ ಶ್ರೀಮತಿ ರಶ್ಮಿ ಮಂಜುನಾಥ ನಾಯಕ್ ದತ್ತಿ ವತಿಯಿಂದ ಆಯೋಜಿಸಿದ್ದ ಉಪನ್ಯಾಸ, ’ವಿದ್ಯಾರಶ್ಮಿ’ ಪ್ರಶಸ್ತಿ ಪ್ರದಾನ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣಾ ಕಾರ್ಯಕ್ರಮದಲ್ಲಿ ’ಮಕ್ಕಳ ಭವಿಷ್ಯ ರೂಪಿಸುವಲ್ಲಿ ಸಂಸ್ಕೃತಿ-ಸಂಸ್ಕಾರಗಳ ಪಾತ್ರ’ ವಿಷಯವಾಗಿ ಅವರು ಉಪನ್ಯಾಸ ನೀಡಿದರು.
ಇಂದಿನ ಯಾಂತ್ರಿಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕಲಿಸುವಲ್ಲಿ ಪೋಷಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕಿದೆ. ಮನೆಯಲ್ಲಿಯೇ ಉತ್ತಮ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಶಾಲೆ ಮತ್ತು ಸಮಾಜವು ಮಕ್ಕಳಲ್ಲಿ ಸದ್ವಿಚಾರ, ಸನ್ನಡತೆ ಹಾಗೂ ಸದುಗುಣಗಳನ್ನು ಬೆಳೆಸಲು ಸಾಧ್ಯ. ಶಿಕ್ಷಣವೆಂದರೆ ಕೇವಲ ಬೌದ್ಧಿಕ ಬೆಳವಣಿಗೆಯಲ್ಲ, ವ್ಯಕ್ತಿತ್ವ ವಿಕಾಸವೂ ಆಗಿದ್ದು, ಶಾಲೆ-ಕಾಲೇಜುಗಳಲ್ಲಿ ನೀತಿ ಶಿಕ್ಷಣಕ್ಕೂ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಮಾಧ್ಯಮದ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತಿಲಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ಐಶ್ವರ್ಯ ಮಂಜುನಾಥ ರಾಯ್ಕರ್ ಅವರಿಗೆ ’ವಿದ್ಯಾರಶ್ಮಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಐಶ್ವರ್ಯ, ಈ ಗೌರವ ತನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ್ದು, ಸಾಧನೆಗೆ ಪೋಷಕರು ಹಾಗೂ ಶಿಕ್ಷಕರ ಪ್ರೋತ್ಸಾಹವೇ ಕಾರಣ ಎಂದು ತಿಳಿಸಿದರು. ದತ್ತಿದಾನಿ ಕೆ.ಎಚ್. ನಾಯಕ್ ಮಾತನಾಡಿ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ವಿದ್ಯಾರ್ಥಿಗಳಲ್ಲಿ ಸಂಸ್ಕಾರಗಳ ಕೊರತೆ ಕಂಡುಬರುತ್ತಿದೆ. ’ವಿದ್ಯಾರಶ್ಮಿ’ ಪ್ರಶಸ್ತಿಯ ಜೊತೆಗೆ ತಮ್ಮ ಪುತ್ರಿಯ ಸ್ಮರಣಾರ್ಥ ’ರಂಗರಶ್ಮಿ’ ಪ್ರಶಸ್ತಿಯನ್ನೂ ನೀಡಲಾಗುತ್ತಿದ್ದು, ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಲಾಗುತ್ತಿದೆ ಎಂದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 