’ಕೂಲಿ ಕೆಲಸ ಮಾಡಿ ನಮ್ಮ ಮಕ್ಕಳನ್ನು ಓದಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಬೇರೆ ಶಾಲೆಗೆ ಕಳಿಸುವುದಿಲ್ಲ: ಪುಂಡಲಿಕ್ ತಳವಾರ
'We are working as wage earners and educating our children. We will not send them to any other schoo
ಧಾರವಾಡ 13: ನಗರದಲ್ಲಿ ಇಂದು ನವಲೂರು ಛಾವಣಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಎಐಡಿಎ? ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎ? ಜಿಲ್ಲಾ ಅಧ್ಯಕ್ಷರು ಸಿಂಧು ಕೌದಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ನವಲೂರು ಪ್ರೌಢ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ನವಲೂರು ಛಾವಣಿಯ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. 71 ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಬಡ ಕೂಲಿ -ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದುವರೆದು, ನವಲೂರು ಛಾವಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಸತ್ತೂರು ಮತ್ತು ಸತ್ತೂರು ಹಿರಿಯ ಪ್ರಾಥಮಿಕ ಶಾಲೆ, ಸತ್ತೂರು ಉರ್ದು ಮಾಧ್ಯಮ ಶಾಲೆ, ತಡಸಿನ ಕೊಪ್ಪ ಹಿರಿಯ ಪ್ರಾರ್ಥಮಿಕ ಶಾಲೆ, ನವಲೂರು ಹರಿಜನ್ ಕೆರೆ ಶಾಲೆ ಸೇರಿದಂತೆ 5 ಶಾಲೆಗಳನ್ನು ಮುಚ್ಚಿ ನವಲೂರು ಮ್ಯಾಗ್ನೆಟ್ ಶಾಲೆಗೆ ಸೇರಿಸಲಾಗುತ್ತಿದೆ. ಈ ರೀತಿ ಕೇವಲ ಧಾರವಾಡ ಜಿಲ್ಲೆಯಲ್ಲೇ 500 ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಮುದಾಯದ ನಡುವೆ ಇರುವ ಊರಿನ ಶಾಲೆಗಳನ್ನು ಮುಚ್ಚಿ, ಮಕ್ಕಳನ್ನು ದೂರದ ಶಾಲೆಗೆ ತಲುಪಿಸಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳುತ್ತಿರುವ ಸರ್ಕಾರವು ಸಾರಿಗೆ ವ್ಯವಸ್ಥೆಯ ಹೊರೆಯನ್ನು ಎಸ್ ಡಿ ಎಂ ಸಿ ತಲೆಯ ಮೇಲೆ ಹೊರೆಸಿದೆ. ಮ್ಯಾಗ್ನೆಟ್ ಶಾಲೆಯ ನಿರ್ವಹಣೆಯನ್ನು ಹೊರಗುತ್ತಿಗೆ ಕೊಡಲಾಗುತ್ತದೆ. ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ ಹುನ್ನಾರ ಎಂದು ಸರ್ಕಾರದ ನಿರ್ಧಾರವನ್ನು ಖಂಡಿಸಿದರು.
ನವಲೂರು ಛಾವಣಿಯ ಶಾಲೆ ಉಳಿಸುವ ಹೋರಾಟಕ್ಕಾಗಿ ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಯನ್ನು ರಚಿಸಲಾಯಿತು. ಹೋರಾಟ ಸಮಿತಿಯ ಊರಿನ ಯುವ ಮುಖಂಡರಾದ ಪುಂಡಲಿಕ ತಳವಾರ್ ಅವರು ಮಾತನಾಡಿ ನಮ್ಮ ಊರಿನ ಶಾಲೆಯನ್ನು ನಾವು ಮುಚ್ಚಲು ಬಿಡುವುದಿಲ್ಲ ಊರಿನ ಜನ ಒಗ್ಗಟ್ಟಾಗಿ ನಾವು ಈ ಶಾಲೆಯನ್ನು ಉಳಿಸಿಕೊಳ್ಳುತ್ತೇವೆ ಶಾಲೆಯ ಉಳುವಿಗಾಗಿ ನಾವು ಹೋರಾಟವನ್ನು ಕಟ್ಟಲು ಸಿದ್ದ ಎಂದು ಮಾತನಾಡಿ, ಬಡವರ ಮಕ್ಕಳು ಓದುವ ಶಾಲೆಗಳನ್ನು ಸೌಲಭ್ಯ . ಬದಲಿಗೆ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದೆ. ಸರ್ಕಾರದ ಮ್ಯಾಗ್ನೆಟ್ ಯೋಜನೆಯನ್ನು ಖಂಡಿಸಿ ಮಾತನಾಡಿದರು. ಸರ್ಕಾರಿ ಶಾಲೆ ಉಳಿಸುವ ಹೋರಾಟಕ್ಕೆ ನಾವು ಸದಾ ಸಿದ್ಧ ಎಂದು ಹೇಳಿದರು . ಸರ್ಕಾರ ಜನರ ಹೋರಾಟವನ್ನು ಎದುರಿಸಲು ಸಿದ್ಧವಾಗಲಿ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಿಂಧು ಕೌದಿ, ಶಾಂತೇಶ್ ನಂದಿಕೋಲ ಮಠ , ಪುಂಡಲಿಕ ತಳವಾರ, ನಿಂಗಪ್ಪ ಲೋಕುರ್, ಫಕೀರ್ಪ ಕಾಡಪ್ನವರ್ , ಆನಂದ್ ಕಾಂಬಳೆ, ಆತ್ಮಾನಂದ ತಳವಾರ, ಪುಂಡಲಿಕ ಲೋಕೂರ್, ತುಕಾರಾಂ ಶಿಂದೆ,ಖಆಒಅ ಸದಸ್ಯರು ಊರಿನ ಗ್ರಾಮಸ್ಥರು ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 