’ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ’ ಹಿ ತಲವಾಯಿ ಗ್ರಾಮಸ್ಥರ ಪ್ರತಿಭಟನೆ

’ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ’ ಹಿ ತಲವಾಯಿ  ಗ್ರಾಮಸ್ಥರ ಪ್ರತಿಭಟನೆ 'We will not let our village school close' protest by Hi Talavai villagers


ಧಾರವಾಡ 09:  ತಲವಾಯಿ  ಗ್ರಾಮಸ್ಥರು ಊರಿನ ದೇವಸ್ಥಾನದ ಎದುರು ಎಐಡಿಎಸೊ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ,75 ವರ್ಷದಾಟಿದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎ?ಒ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಹೆಬ್ಬಳ್ಳಿಯ ಸರಕಾರಿ ಹಿರಿಯ ಬಾಲಕರ ಮಾದರಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ತಲವಾಯಿ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ. 77 ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಬಡರೈತ-ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರೆದು, ವನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ, ತಲವಾಯಿ ಕಿರಿಯ ಪ್ರಾಥಮಿಕ ಶಾಲೆ ಮತ್ತು , ಮಾರಡಗಿ ಉರ್ದು ಕಿರಿಯ ಪ್ರಾಥಮಿಕ ಶಾಲೆ, ಹೆಬ್ಬಳ್ಳಿಯ ಉರ್ದು ಕಿರಿಯ ಪ್ರಾಥಮಿಕ ಶಾಲೆ, ಹೆಬ್ಬಳ್ಳಿಯ ಜನತಾ ಪ್ಲಾಟ್ ಹಿರಿಯ ಪ್ರಾಥಮಿಕ ಶಾಲೆ, ಶಿವಳ್ಳಿಯ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ 6 ಶಾಲೆಗಳನ್ನು ಮುಚ್ಚಿ ಹೆಬ್ಬಳ್ಳಿಯ ಮ್ಯಾಗ್ನೆಟ್ ಶಾಲೆಗೆ ಸೇರಿಸಲಾಗುತ್ತಿದೆ. ಈ ರೀತಿ ಕೇವಲ ಧಾರವಾಡ ಜಿಲ್ಲೆಯಲ್ಲೇ 500 ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಮುದಾಯದ ನಡುವೆ ಇರುವ ಊರಿನ ಶಾಲೆಗಳನ್ನು ಮುಚ್ಚಿ, ಮಕ್ಕಳನ್ನು ದೂರದ ಶಾಲೆಗೆ ತಲುಪಿಸಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳುತ್ತಿರುವ ಸರ್ಕಾರವು ಸಾರಿಗೆ ವ್ಯವಸ್ಥೆಯ ಹೊರೆಯನ್ನು ಎಸ್‌ಡಿಎಂಸಿ ತಲೆಯ ಮೇಲೆ ಹೊರೆಸಿದೆ. ಮ್ಯಾಗ್ನೆಟ್ ಶಾಲೆಯ ನಿರ್ವಹಣೆಯನ್ನು ಹೊರಗುತ್ತಿಗೆ ಕೊಡಲಾಗುತ್ತದೆ. ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ ಹುನ್ನಾರ ಎಂದು ಸರ್ಕಾರದ ನಿರ್ಧಾರವನ್ನು ಖಂಡಿಸಿದರು.  

 ನಂತರ ಊರಿನ ಗ್ರಾಮಸ್ಥರಾದ ಬಸವರಾಜ ಬಂಗಾರಿ  ಮಾತನಾಡಿ, ಬಡವರ ಮಕ್ಕಳು ಓದುವ ಗ್ರಾಮೀಣ ಭಾಗದ ಶಾಲೆಗಳನ್ನು ಸೌಲಭ್ಯ ಒದಗಿಸಿ ಅಭಿವೃದ್ಧಿ ಪಡಿಸಬೇಕಾದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ. ಬದಲಿಗೆ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದೆ. ನಮ್ಮತಲವಾಯಿ ಶಾಲೆ ಮುಚ್ಚಿದರೆ ನಮ್ಮ ಮಕ್ಕಳನ್ನು ಖಂಡಿತ ನಾವು ಹೆಬ್ಬಳ್ಳಿಗೆ ಕಳಿಸಲು ಸಾಧ್ಯವಿಲ್ಲ ಯಾಕೆಂದರೆ ಇಲ್ಲಿಯವರೆಗೂ ನಮ್ಮಊರಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ ಅದಲ್ಲದೆ ಇಲ್ಲಿಯ ಜನರೆಲ್ಲಾ ಹೊಲದ ಕೆಲಸಕ್ಕೆ ಹೋದರೆ ಬರುವುದೇ ರಾತ್ರಿಯಾವ ಭರವಸೆಯ ಮೇಲೆ ನಾವು ಬೇರೆಊರಿಗೆ ನಮ್ಮ ಮಕ್ಕಳನ್ನು ಕಳಿಸಬೇಕು. ಸರ್ಕಾರಕ್ಕೆ ಕಿಂಚಿತ್ತಾದರೂ ಕಾಳಜಿ ಇದ್ದಿದ್ದರೆ ಮೂಲಭೂತ ಸೌಕರ್ಯಗಳನ್ನು ಕೊಟ್ಟು ನಮ್ಮ ಶಾಲೆಯನ್ನು ಬಲಪಡಿಸಬೇಕಿತ್ತು ಅದನ್ನು ಬಿಟ್ಟು ಮುಚ್ಚಿ ಹಾಕುತಿದ್ದಾರೆ.

ಇದನ್ನು ನಮ್ಮೂರಿನ ಎಲ್ಲ ಗ್ರಾಮಸ್ಥರು ತೀವ್ರವಾಗಿ ವಿರೋಧಿಸುತ್ತೇವೆ. ನಮ್ಮ ಮಕ್ಕಳು ನಮ್ಮೂರಿನ ಶಾಲೆಯಲ್ಲಿ ಕಲಿಯುತ್ತಾರೆ. ಇಷ್ಟಾಗಿಯೂ ಸರ್ಕಾರ ನಮ್ಮಊರಿನ ಶಾಲೆಯನ್ನು ಮುಚ್ಚಲು ಮುಂದುವರೆದರೆ ತಲವಾಯಿ ಗ್ರಾಮಸ್ಥರೆಲ್ಲ ಒಗ್ಗಟ್ಟಿನಿಂದ ಉಗ್ರ ಹೋರಾಟ ಮಾಡುತ್ತೇವೆ. ಸರ್ಕಾರ ಜನರ ಹೋರಾಟವನ್ನು ಎದುರಿಸಲು ಸಿದ್ಧವಾಗಲಿ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಜಿಲ್ಲಾಅಧ್ಯಕ್ಷರಾದ ಸಿಂಧೂ ಕೌದಿ, ಊರಿನ ಗ್ರಾಮಸ್ಥರಾದ ಮಂಜುನಾಥ್ ಮೇಟಿ, ಈಶ್ವರ್‌ಕಮ್ಮಾರ್, ಹನುಮಂತ್ ಉಣಕಲ್, ರವಿ ಕರಿ, ರವಿಚಂದ್ರ ಜಮ್ಯಾಳ, ಏಕಾಂತ ಹೊಸಮನಿ, ಮನೋಜ್ ಬಡಿಗೇರ್ ಹಾಗೂ  ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.