‘ಮಹಿಳೆಯರು ಸ್ವಾವಲಂಬಿಗಳಾಗಬೇಕು’
'Women should become self-reliant'
ಲೋಕದರ್ಶನ ವರದಿ
ಬೆಳಗಾವಿ 06: ಮಹಿಳೆಯರು ಕೌಶಲ್ಯ ಪಡೆದು ಸ್ವಾವಲಂಬಿಗಳಾಗಬೇಕು, ಗ್ರಾಮೀಣ ಮಹಿಳೆಯರ ಬದುಕಿನಲ್ಲಿ ಕೌಶಲ್ಯ ತರಬೇತಿ ಮಹತ್ವದ ಬದಲಾವಣೆ ತರಬಲ್ಲದು ಎಂದು ಕ್ವಾಲಿಟಿ ಅನಿಮಲ್ ಫೀಡ್ಸ್ ಪ್ರೈವೇಟ್ ಲಿಮಿಟೆಡ್ನ ಸಿಇಓ ಸಚಿನ್ ನಂದಾ ಅಭಿಪ್ರಾಯ ಪಟ್ಟರು.
ಬೆಳಗಾವಿ ಗ್ರಾಮೀಣ ಭಾಗದ ತೀರ್ಥಕುಂಡೆ ಗ್ರಾಮದ ಸಮುದಾಯ ಭವನದಲ್ಲಿ ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ಕ್ವಾಲಿಟಿ ಕಂಪನಿ ಮಹಿಳೆಯರಿಗೆ ಆಯೋಜಿಸಿದ್ದ ಕೌಶಲ್ಯ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅಥಿಗಳಾಗಿ ಭಾಗವಹಿಸಿದ ಕ್ವಾಲಿಟಿ ಸಂಸ್ಥೆಯ ಅಧ್ಯಕ್ಷರು ಡಾ. ಮಧುಕರ ಪವಾರ್ ಮಾತನಾಡಿ ತರಬೇತಿಗಳ ಮೂಲಕ ಮಹಿಳೆಯರು ಸ್ವ ಉದ್ಯೋಗ ಆರಂಭಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬಹುದು. ಮನೆಮಟ್ಟದಲ್ಲೇ ಆದಾಯ ಗಳಿಸುವ ಅವಕಾಶಗಳು ಸೃಷ್ಟಿಯಾಗುತ್ತಿದ್ದು, ಕುಟುಂಬದ ಆರ್ಥಿಕ ಸ್ಥಿರತೆಗೆ ಸಹಕಾರಿಯಾಗುತ್ತದೆ. ಜೊತೆಗೆ ಮಹಿಳೆಯರಲ್ಲಿ ಆತ್ಮವಿಶ್ವಾಸ, ನಿರ್ಧಾರ ಕೈಗೊಳ್ಳುವ ಶಕ್ತಿ ಹಾಗೂ ಸಾಮಾಜಿಕ ಗೌರವವೂ ಹೆಚ್ಚಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೋಹನ್ ಸಿದ್ದಿ, ಗ್ರಾಮ ಪ್ರಮುಖರಾದ ಮಲ್ಲಪ್ಪ,ಮಹಾದೇವ, ಶಿಕ್ಷಕಿ ದೀಪಾ ಹಿರೇಮಠ ಮತ್ತಿತ್ತರರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸುರೇಖಾ ಪಾಟೀಲ ಅವರು ಸ್ವಾಗತ ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಮೀರಾ ಅವರು ನಡೆಸಿಕೊಟ್ಟರು. ಈ ವೇಳೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 