‘ಮಹಿಳೆಯರು ಆರೋಗ್ಯದ ಕಾಳಜಿ ವಹಿಸಿ’: ಚವ್ಹಾಣ
'Women should take care of their health': Chavan
ದೇವರಹಿಪ್ಪರಗಿ 17: ಪ್ರತಿಯೊಬ್ಬರೂ ಖಾಯಿಲೆಗಳ ಬಗ್ಗೆ ಉದಾಸೀನ ಮನೋಭಾವ ತಾಳದೆ ಆಗಿಂದಾಗ್ಗೆ ಆರೋಗ್ಯ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆಯುವುದು ಅಗತ್ಯವಾಗಿದೆ ಎಂದು ದೇವರಹಿಪ್ಪರಗಿ ಪ.ಪಂ ಸದಸ್ಯರ ಪ್ರತಿನಿಧಿಯಾದ ವಿನೋದ ಚವ್ಹಾಣ ಹೇಳಿದರು.
ಪಟ್ಟಣದ ಸಮೀಪವಿರುವ ತಾಂಡಾ ಗ್ರಾಮದಲ್ಲಿ ಬುಧವಾರದಂದು ಹಮ್ಮಿಕೊಂಡಿದ್ದ ಮಹಿಳೆ ಸಶಕ್ತ ಪರಿವಾರ ಅಭಿಯಾನಕ್ಕೆ ಸದಸ್ಯರ ಅನುಪಸ್ಥಿತಿಯಲ್ಲಿ ಚಾಲನೆ ನೀಡಿ ಮಾತನಾಡಿದ ಅವರು,ಎಲ್ಲರಿಗೂ ಆರೋಗ್ಯವೇ ಮಹಾ ಭಾಗ್ಯವಾಗಿದ್ದು, ಮಹಿಳೆಯರು ಆರೋಗ್ಯವಂತರಾಗಿದ್ದರೆ ತಮ್ಮ ಕುಟುಂಬವನ್ನೇ ಆರೋಗ್ಯವಂತ ಕುಟುಂಬವನ್ನಾಗಿ ಕಾಪಾಡಿಕೊಳ್ಳಬಹುದು ತಾವೆಲ್ಲರೂ ಆರೋಗ್ಯದ ಹಿತ ದೃಷ್ಟಿಯಿಂದ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಅವರು ಮಾತನಾಡಿ, ಸ.17ರಿಂದ ಅ.2ರ ವರೆಗೆ ಆರೋಗ್ಯವಂತ ಮಹಿಳೆ ಮತ್ತು ಸಶಕ್ತ ಪರಿವಾರ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಆಯುಷ್ಮಾನ್ ಆರೋಗ್ಯ ಮಂದಿರ, ನಮ್ಮ ಕ್ಲಿನಿಕ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತ್ರೀಯರಿಗೆ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ ಅಲ್ಲದೆ ಶಾಲೆ ಕಾಲೇಜುಗಳಲ್ಲಿ ಹದಿಹರೆಯದವರ ಆರೋಗ್ಯ ಜಾಗೃತಿ ಕಾರ್ಯಕ್ರಮ ಅಪೌಷ್ಟಿಕತೆ ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ಕುರಿತಾದ ಆರೋಗ್ಯ ತಪಾಸಣೆ ಮಾಡಲಾಗುವುದು ಆದ್ದರಿಂದ ಮಹಿಳೆಯರು ಅಭಿಯಾನದಲ್ಲಿ ಪಾಲ್ಗೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಬಾಲ್ಯ ವಿವಾಹ ಮಾಡಕೂಡದು ಅಂತರ್ ಹೆರಿಗೆ ಕಾಪಾಡುವದರಿಂದ ಶಿಶುಮರಣ ತಾಯಿ ಮರಣ ತಪ್ಪಿಸಬಹುದು ಎಂದು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಸುಕನ್ಯ ಚಳಗೇರಿ ಮಾತನಾಡಿ, ಹೆಣ್ಣು ಸಂಸಾರದ ಕಣ್ಣು, ಮಹಿಳೆ ಆರೋಗ್ಯವಂತಾಗಿದ್ದರೆ ಕುಟುಂಬವನ್ನು ಸುಸೂತ್ರವಾಗಿ ನಡೆಸಬಲ್ಲಳು ಆದ್ದರಿಂದ ಎಲ್ಲ ವಯಸ್ಸಿನ ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪ್ರಭಾರ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಲಕ್ಷ್ಮಿಕಾಂತ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಅರ್ಚನಾ ಪಾಟೀಲ ಆಶಾ ಕಾರ್ಯಕರ್ತೆಯರು ತಾಯಂದಿರು ಶಾಲೆಯ ಗುರುಮಾತೆಯರು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.ಸಮುದಾಯ ಆರೋಗ್ಯ ಅಧಿಕಾರಿ ಕಿರಣ ಪಾಟೀಲ ನಿರೂಪಿಸಿ, ವಂದಿಸಿದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 