ಜ್ಞಾನ ಶಕ್ತಿ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ
'World No Tobacco Day' celebrated at Gyan Shakti Campus
ವಿಜಯಪುರ, 02 : ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನ ಶಕ್ತಿ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ’ದ ಅಂಗವಾಗಿ ಶಿಕ್ಷಣ ಅಧ್ಯಯನ ವಿಭಾಗ, ಎನ್.ಎಸ್.ಎಸ್. ಸ್ವಯಂ ಸೇವಕಿಯರು ಮಾನವ ಸರಪಳಿ ನಿರ್ಮಿಸುವ ಮೂಲಕ ವಿವಿಯ ಆವರಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಚಾಲನೆ ನೀಡಿದರು.
ತಂಬಾಕನಿಂದ ಆಗುವ ವಿವಿಧ ಅನಾಹುತಗಳ ಬಗ್ಗೆ ಅರಿವು ಮೂಡಿಸಲು ಕರಪತ್ರಗಳನ್ನು ಹಂಚಿದರು. ವಿಶ್ವವಿದ್ಯಾನಿಲಯದ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿ ತಂಬಾಕು ಮುಕ್ತ ದೇಶವಾಗಿಸಲು ಎಲ್ಲರೂ ಶ್ರಮ ಪಡಬೇಕು ಎಂದು ಪ್ರಚಾರ ನಡೆಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್.ಚಂದ್ರಶೇಖರ, ಎನ್.ಎಸ್.ಎಸ್ ಸಂಯೋಜಕ ಪ್ರೊ.ಅಶೋಕ ಸುರಪುರ, ಶಿಕ್ಷಣ ಅಧ್ಯಯನ ವಿಭಾಗದ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ವಿಷ್ಣು ಶಿಂಧೆ, ಡಾ.ಗುಲಾಬ್ ರಾಠೋಡ್, ಡಾ.ಪ್ರಜಾಪತಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 