‘ಸ್ತ್ರೀ ಒಂದು ನಕ್ಷತ್ರ, ಅವರಿಗೆ ಬೇರೆ ಬೆಳಕು ಬೇಕಿಲ್ಲ’ : ಪ್ರೊ. ಕರಿಮುನ್ನಿಸಾ ಸಯ್ಯದ್
'A woman is a star, she needs no other light': Prof. Karimunnisa Syed
ಧಾರವಾಡ 09 : ಸ್ತ್ರೀ ಒಂದು ನಕ್ಷತ್ರ, ಅವರಿಗೆ ಬೇರೆ ಬೆಳಕು ಬೇಕಿಲ್ಲ, ಅವಳು ಬೇರೆಯವರಿಗೆ ಬೆಳಕು ನೀಡಬೇಕು. ಅವಳು ಹುಟ್ಟುವಾಗಲೇ ವಿಶೇಷಳು. ಪ್ರತಿ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುವ ಹಾಗೆ ಪ್ರತಿ ಯಶಸ್ವಿ ಮಹಿಳೆಯ ಹಿಂದೆ ಒಬ್ಬ ಪುರುಷನಿರುತ್ತಾನೆ. ಮಹಿಳೆಯ ಯಶಸ್ಸಿನ ಪೂರ್ಣತೆ ಪುರುಷರೊಂದಿಗೆ ಗುರುತಿಸಿಕೊಂಡಿದೆ ಎಂದು ಹೇಳಿದರು.
ಇಲ್ಲಿಯ ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ, ವಿದ್ಯಾಗಿರಿ, ಧಾರವಾಡದಲ್ಲಿ ಆಯೋಜಿಸಿದ್ದ ‘ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ’ಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಧಾರವಾಡದ ಕಾಲೇಜು ಶಿಕ್ಷಣ ಇಲಾಖೆಯ ಮಾನ್ಯ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಪ್ರೊ. ಕರಿಮುನ್ನಿಸಾ ಸಯ್ಯದ್ ಅವರು, ‘ನಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲಬೇಕು. ಅಸ್ಮಿತೆ ಪಡೆಯಬೇಕು. ಸಾಲುಮರದ ತಿಮ್ಮಕ್ಕ ನಂತಹ ಮಹಿಳೆ ನಮಗೆ ಆದರ್ಶವಾಗಬೇಕು ಎಂದರು.
ಗೌರವ ಅತಿಥಿಗಳಾಗಿ ಆಗಮಿಸಿದ್ದ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ ಅವರು, ಸ್ವಾತಂತ್ರ್ಯ ನಂತರ ಕೆಲ ವರ್ಷಗಳಲ್ಲಿಯೇ ಮಹಿಳೆಯರ ಶಿಕ್ಷಣ, ಉದ್ಯೋಗ ಮತ್ತು ಇತರ ಕ್ಷೇತ್ರಗಳಲ್ಲಿ ಪಾಲು ಗಣನಿಯವಾಗಿ ಹೆಚ್ಚಿದೆ. ತಾಯಿಯಿಂದ ಮನೆ ಪ್ರಗತಿ ಸಾಧಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಧಾರವಾಡದ ವಾಣಿಶ್ರೀ ಅಜಿತಪ್ರಸಾದ ಅವರು, ಮಹಿಳೆಯರು ಕರ್ನಾಟಕದಲ್ಲಿ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಭನೆ ಸಾಧಿಸುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರ ಮಹತ್ವದ್ದು ಎಂದು ಹೇಳಿದರು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವೆಂಕಟೇಶ ಮುತಾಲಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಶೌಕತ ಅಲಿ, ಕಾಲೇಜಿನ ಉಪಪ್ರಾಚಾರ್ಯರಾದ ಡಾ. ನಳಿನಿ ಡಿ. ಕುಲಕರ್ಣಿ, ಕಾಲೇಜಿನ ಮಹಿಳಾ ಸಬಲೀಕರಣ ಅಧ್ಯಕ್ಷರಾದ ಡಾ. ಶಿಲ್ಪಾ ಆಡೂರ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಕುಮಾರಿ. ದೀಪಾ ಮೇಟಿ ನಿರೂಪಿಸಿದರು. ಕುಮಾರಿ. ರುಬಿನಾ ನದಾಫ್ ಪ್ರಾರ್ಥಿಸಿದರು. ಉಪಪ್ರಾಚಾರ್ಯರಾದ ಆವಂತಿಕಾ ರೊಟ್ಟಿ ಸ್ವಾಗತಿಸಿದರು. ಡಾ. ರತ್ನಾ ಐರಸಂಗ, ಕುಮಾರಿ. ತನುಜಾ ರೋಖಡೆ ಮತ್ತು. ಗೀತಾ ಚಳಗೇರಿ ಪರಿಚಯಿಸಿದರು. ಡಾ. ಸುಮಂಗಲಾದೇವಿ ವಂದಿಸಿದರು. ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ಮಹಿಳಾ ಸಾಧಕಿಯರಿಗೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸನ್ಮಾನಿಸಲಾಯಿತು. ಮಹಾವಿದ್ಯಾಲಯದ ಸಮಸ್ತ ಮಹಿಳಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 