‘ಹಿಜಾಬ್ ಧರಿಸಿದ ಮಹಿಳೆ ದೇಶದ ಪ್ರಧಾನಿಯಾಗುತ್ತಾಳೆ’
'A woman wearing a hijab will become the country's Prime Minister'
ಸೊಲ್ಲಾಪುರ: ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ, ಈ ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳು ಸಿಗುತ್ತಿವೆ.ಈ ಸಂವಿಧಾನದ ಬಲದಿಂದ, ಹಿಜಾಬ್ ಧರಿಸಿದ ಮಹಿಳೆ ಒಂದು ದಿನ ಭಾರತದ ಪ್ರಧಾನಿಯಾಗುತ್ತಾಳೆ ಎಂದು ಎಐಎಂಐಎಂ ರಾಷ್ಟ್ರೀಯ ಅಧ್ಯಕ್ಷ ಸಂಸದ ಅಸಾದುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಎಐಎಂಐಎಂ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ ಮಹಾ ಮೈತ್ರಿಕೂಟ ಹಾಗೂ ಎನ್ಸಿಪಿ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ತೀವ್ರವಾಗಿ ಟೀಕಿಸಿದರು.ಅಜಿತ್ ಪವಾರ್ ಗೆ ಹಾಕುವ ಮತ ನರೇಂದ್ರ ಮೋದಿಗೆ ಹಾಕಿದಂತಾಗುತ್ತದೆ. ಅವರ ಪಕ್ಷಕ್ಕೆ ಹಾಕುವ ಮತ ಮೋದಿ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಗೆ ಹಾಕಿದಂತಾಗುತ್ತದೆ ಎಂದರು.
"ಅಂಬೇಡ್ಕರ್ ಅವರು ನೀಡಿದ ಭಾರತೀಯ ಸಂವಿಧಾನವು ಯಾವುದೇ ಭಾರತೀಯನು ದೇಶದ ಪ್ರಧಾನಿಯಾಗಲು ಅವಕಾಶ ನೀಡುತ್ತದೆ. ಹಿಜಾಬ್ ಧರಿಸಿದ ಮಹಿಳೆಯೊಬ್ಬರು ಈ ದೇಶದ ಪ್ರಧಾನಿಯಾಗುವ ದಿನ ಖಂಡಿತವಾಗಿಯೂ ಬರುತ್ತದೆ.ಆದರೆ ಆ ದಿನವನ್ನು ನೋಡಲು ನಾನು ಬದುಕದೇ ಇರಬಹುದು"ಎಂದು ಹೇಳಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 