’ಅಶೋಕ ವೃಕ್ಷ’ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ
'Ashoka Vriksha' congratulatory book release program
ವಿಜಯಪುರ 23. ತಾಳಿಕೋಟಿ ತಾಲೂಕಿನ ಮಿಣಜಗಿ ಗ್ರಾಮದ ಪ್ರೊ ಎ. ಬಿ ಪಾಟೀಲ ಅವರು ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿ, ಕೃಷಿ ವಿಸ್ತರಣಾ ನಿರ್ದೇಶಕರಾಗಿ, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ, ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿ, ನಿವೃತ್ತಿ ನಂತರ ಕೃಷಿ ಸಚಿವರಾಗಿದ್ದ ಶಿವಶಂಕರ ರೆಡ್ಡಿ, ಬಿ.ಸಿ.ಪಾಟೀಲ, ಲಕ್ಷ್ಮಣ ಸವದಿ ಹಾಗೂ ಹಾಲಿ ಸಚಿವ ಚೆಲುರಾಯಸ್ವಾಮಿ ಸೇರಿದಂತೆ ಐವರು ಕೃಷಿ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿ, ಕೃಷಿ ಸಲಹೆಗಾರರಾಗಿ, ಕರ್ನಾಟಕದಲ್ಲಿ ರೈತ ಮಿತ್ರರಾಗಿ, ಜನಾನುರಾಗಿ ಆಗಿರುವ ಪ್ರೊ. ಎ. ಬಿ. ಪಾಟೀಲ ಅವರು 70 ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಅವರ ಅಭಿಮಾನಿಗಳು ’ಅಶೋಕ ವೃಕ್ಷ’ ಅಭಿನಂದನಾ ಗ್ರಂಥ ಬಿಡುಗಡೆಯನ್ನು ದಿ.26 ಶುಕ್ರವಾರ ಬೆ.10 ಗಂ. ಬೆಂಗಳೂರಿನ ಜೆ.ಸಿ. ರಸ್ತೆಯ, ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಹಮ್ಮಿಕೊಂಡಿದ್ದಾರೆ.
ಈ ಕಾರ್ಯಕ್ರಮ ಉದ್ಘಾಟನೆಯನ್ನು ಕೆಂಗರಿಯ ಒಕ್ಕಲಿಗರ ಮಹಾಸಂಸ್ಥಾನಮಠದ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಜಿ ಉದ್ಘಾಟನೆ ಮಾಡಲಿದ್ದು, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅಭಿನಂದನಾ ಗ್ರಂಥವನ್ನು ಬಿಡುಗಡೆಗೊಳಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ. ಎಲ್.ಎನ್ ಮುಂಕುಂದರಾಜ ಪುಸ್ತಕ ಕುರಿತು ಮಾತನಾಡುವರು. ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಎನ್.ಎಸ್.ಶಿವಶಂಕರ ರೆಡ್ಡಿ, ಬಿ.ಸಿ.ಪಾಟೀಲ, ಕೃಷಿ ಇಲಾಖೆ ಆಯುಕ್ತ ವಾಯ್ ಎಸ್. ಪಾಟೀಲ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಕೃಷಿ ಬೆಲೆ ಆಯೋಗ ಅಧ್ಯಕ್ಷ ಅಶೋಕ ದಳವಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ. ಎ.ಬಿ.ಪಾಟೀಲ ಅವರ ವಿದ್ಯಾರ್ಥಿಗಳು, ಆಸಕ್ತ ರೈತರು, ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟನಾ ಸಮಿತಿಯ ಸಾತ್ವೀರ ರೊಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧನ್ಯವಾದಗಳು, ಡಾ.ಮಹಾಂತೇಶ ಬಿರಾದಾರ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 