ನ.26 ರಂದು ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮ

ಸಂಯುಕ್ತಾಶ್ರಯದಲ್ಲಿ “ಸಂವಿಧಾನ ದಿನಾಚರಣೆ” ಕಾರ್ಯಕ್ರಮ

ನ.26 ರಂದು ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮ

ಬಳ್ಳಾರಿ 25:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಸಂವಿಧಾನ ದಿನಾಚರಣೆ” ಕಾರ್ಯಕ್ರಮವನ್ನು ನ.26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಏರಿ​‍್ಡಸಲಾಗಿದೆ. 

ನ.26 ರಂದು ಬೆಳಿಗ್ಗೆ 9.30 ಗಂಟೆಗೆ ಡಾ.ಬಿ.ಆರ್‌.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಮಾಲಾರೆ​‍್ಣ ಮಾಡಿ ಪುಷ್ಪನಮನ ಸಲ್ಲಿಸಲಾಗುವುದು. 

ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟಗಳಲ್ಲಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಂವಿಧಾನದ ಆಶಯಗಳ ಕುರಿತಂತೆ ತಜ್ಞರಿಂದ ವಿಶೇಷ ಉಪನ್ಯಾಸ ಮತ್ತು ಚಿತ್ರಕಲಾ ಪ್ರದರ್ಶನಾ, ಸಂವಿಧಾನ ಪೀಠಿಕೆ ವಾಚನ ಮಾಡಿ, ಸಹಿ ಅಭಿಯಾನ ಆಯೋಜಿಸಲಾಗಿದೆ.ಬಳ್ಳಾರಿ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಸರ್ಕಾರದಿಂದ ಅನುಮೋದಿತ (ಅಂದಾಜು 10ಘಿ12 ಅಡಿ ಆಳತೆಯ) ಭಾರತ ಸಂವಿಧಾನ ಪೀಠಿಕೆಯನ್ನು ಗ್ರಾನೈಟ್ ಕಲ್ಲಿನಲ್ಲಿ ಕೆತ್ತಿಸಿ 26ನೇ ಜನವರಿ 2025ರಂದು ಉದ್ಘಾಟಿಸಲಾಗುತ್ತದೆ.ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ನ್ಯಾಯಮೂರ್ತಿ ಡಾ.ನಾಗಮೋಹನ ದಾಸ್ ಅವರು ರಚಿಸಿರುವ “ಸಂವಿಧಾನ ಓದು” ಪುಸ್ತಕಗಳ ವಿತರಣೆ ಮಾಡಲಾಗುವುದು. 

ಕಾರ್ಯಕ್ರಮದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಹಾಗೂ ಅಧಿಕಾರಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.